ಬೆಂಗಳೂರು : ರಾಜ್ಯದಲ್ಲಿ ಮತ್ತೆ 116 ಮಂದಿಗೆ ಕೊರೋನ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ ಒಂದೂವರೆ ಸಾವಿರ ದಾಟಿದ್ದು, ಒಟ್ಟು ಸಂಖ್ಯೆ 1578ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬಲೆಟಿನ್ ತಿಳಿಸಿದೆ.
ಇಂದು ಮಧ್ಯಾಹ್ನ 12 ಗಂಟೆಯ ಅವಧಿಯಲ್ಲಿ 116 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ ಕರಾವಳಿ ಕರ್ನಾಟಕದಲ್ಲಿ 40 ಪ್ರಕರಣಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಉಡುಪಿಯಲ್ಲಿ 25, ಮಂಡ್ಯದಲ್ಲಿ 15, ಹಾಸನದಲ್ಲಿ 13, ಬಳ್ಳಾರಿ 11, ಉತ್ತರ ಕನ್ನಡದಲ್ಲಿ 9, ದ.ಕ., ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ತಲಾ 6, ಧಾರವಾಡ 5, ಗದಗ ಮತ್ತು ಚಿಕ್ಕಬಳ್ಳಾಪುರ ತಲಾ 2, ವಿಜಯಪುರ 1 ಸೇರಿದಂತೆ 116 ಮಂದಿಯಲ್ಲಿಂದು ಇಂದು ಸೋಂಕು ಪತ್ತೆಯಾಗಿದೆ.
ಇದುವರೆಗೆ 41 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಬುಲೆಟಿನ್ ತಿಳಿಸಿದೆ.
source: News Hunt
More Stories
ಶರಾವತಿಯ ನದಿ ತಿರುವಿನ ಮಾರಕ ಯೋಜನೆ
ಸಾಹಿತಿ ಶಿಕ್ಷಕಿ ಜಯಶ್ರೀ ರಾಜು ರವರಿಗೆ ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿ ಭಾಜನ
ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್:ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ