March 27, 2025

Bhavana Tv

Its Your Channel

ಕಂಟೈನ್ಮೆಂಟ್ ವಲಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಇಲ್ಲ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್-19 ವೈರಸ್ ತೀವ್ರತೆಯ ವಿಚಾರವಾಗಿ ಕಂಟೈನ್ಮೆಂಟ್ ವಲಯ ಎಂದು ಗುರುತಿಸಿರುವ ಕಡೆಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಶುಕ್ರವಾರ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ರಾಜ್ಯದ ಯಾವುದೇ ಕಂಟೈನ್ಮೆಂಟ್ ವಲಯಗಳಲ್ಲಿ ಪರೀಕ್ಷೆಗಳನ್ನು ನಡೆಸುವುದಿಲ್ಲ. ಪರೀಕ್ಷೆ ನಡೆಯುವ ದಿನದ ಆಸುಪಾಸಿನಲ್ಲಿ ಯಾವುದೇ ವಲಯ ಕಂಟೈನ್ಮೆಂಟ್ ವಲಯವೆಂದು ಘೋಷಿತವಾದಾಗ ಅಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲು ಅವಕಾಶ ಕಲ್ಪಿಸಲಾಗುತ್ತದೆ‌ ಎಂದರು.

ಪೂರಕ ಪರೀಕ್ಷೆಯಲ್ಲಿ ಪುನರಾವರ್ತಿತ ಅಭ್ಯರ್ಥಿ ಎಂದು ಪರಿಗಣಿಸದೇ, ಹೊಸ ಪರೀಕ್ಷಾರ್ಥಿ ಎಂದೇ ಪರಿಗಣಿಸಿ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮಾರ್ಚ್ ತಿಂಗಳಾಂತ್ಯದಲ್ಲಿ ನಡೆಯಬೇಕಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯು ಕೋವಿಡ್-19 ಕಾರಣದಿಂದ ಮುಂದೂಡಿಕೆಯಾಗಿತ್ತು. ಸದ್ಯ ಜೂನ್ 25ರಿಂದ ಪರೀಕ್ಷೆ ನಡೆಸಲು ಇಲಾಖೆ ಸಜ್ಜಾಗಿದೆ. ಪರೀಕ್ಷಾ ವೇಳಾಪಟ್ಟಿಯೂ ಬಿಡುಗಡೆಯಾಗಿದೆ.

Source: News Hunt

error: