
ಬೆಂಗಳೂರು: ಮುಂದಿನ ವಾರದಿಂದ ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಒಟ್ಟು 54 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಜೂನ್ ಅಂತ್ಯದ ವೇಳೆಗೆ ಮೌಲ್ಯಮಾಪನ ಕೊನೆಗೊಳ್ಳುವ ನಿರೀಕ್ಷೆ ಇದೆ.
ಈಗಾಗಲೇ ರಾಜ್ಯದ 8 ಕೇಂದ್ರಗಳಲ್ಲಿ ಅರ್ಥಶಾಸ್ತ್ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಿದೆ. ಭೌತವಿಜ್ಞಾನ, ರಸಾಯನವಿಜ್ಞಾನ, ಗಣಿತ ಮತ್ತು ಜೀವವಿಜ್ಞಾನ (ಪಿಸಿಎಂಬಿ) ಉತ್ತರ ಪತ್ರಿಕೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಉತ್ತರ ಪತ್ರಿಕೆಗಳ ಕುರಿತಂತೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಶಿಬಿರಾಧಿಕಾರಿಗಳಿಗೆ ಕೋಡಿಂಗ್ ವ್ಯವಸ್ಥೆ ಮಾಡಲಾಗಿದೆ.
Source: kannada prabha
More Stories
ವಿದ್ಯುತ್ ಗುತ್ತಿಗೆದಾರರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸರ್ವಸದಸ್ಯರ ಸಭೆ
ಕರ್ನಾಟಕ ರಾಜ್ಯ ಕೆಪಿಟಿಸಿಎಲ್ ಮತ್ತು ಹೆಸ್ಕಾಂ ಹೊರ ಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆ ವತಿಯಿಂದ ಅನಿರ್ದಿಷ್ಟ ಅವಧಿ ಮುಷ್ಕರ
ಮೇ ೨೨ ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಸಭೆ ಅಧಿವೇಶನ, ಹಂಗಾಮಿ ಸಭಾಧ್ಯಕ್ಷರಾಗಿ ಆರ್ ವಿ ದೇಶಪಾಂಡೆ :