July 16, 2024

Bhavana Tv

Its Your Channel

ಸುವರ್ಣ ಸಾಧಕ ಪ್ರಶಸ್ತಿ ಸ್ವೀಕರಿಸಿದ ಅನಂತಮೂರ್ತಿ ಹೆಗಡೆ

ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭದಿಂದ ನೀಡುವ ಪ್ರಶಸ್ತಿ

ಶಿರಸಿ: ರಾಜ್ಯದ ಪ್ರತಿಷ್ಠಿತ ಸುದ್ದಿ ಮಾಧ್ಯಮ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ವತಿಯಿಂದ ನೀಡುವ ಸುವರ್ಣ ಸಾಧಕ ಪ್ರಶಸ್ತಿಯನ್ನು ಇಂದು ಬೆಂಗಳೂರಿನಲ್ಲಿ ಆಯೋಜಿಸಿದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಶಿರಸಿ ಸಾಮಾಜಿಕ ಹೋರಾಟಗಾರ ಹಾಗೂ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಸ್ವೀಕರಿಸಿದರು.

ಇಂದು ಬೆಂಗಳೂರಿನ ಶಾಂಗ್ರೀಲಾ ಹೋಟೆಲ್‌ನಲ್ಲಿ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭದಿಂದ ಆಯೋಜಿಸಿದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ರಾಜ್ಯ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಮಾಧ್ಯಮ ಸಂಸ್ಥೆಯು ಕರ್ನಾಟಕದ ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಸಾಧನೆಗೈದು, ಎಲೆಮರೆಕಾಯಿಯಂತಿರುವ ಸಾಧಕರನ್ನು ಗುರುತಿಸಿ ಪುರಸ್ಕರಿಸುವ ಪ್ರಶಸ್ತಿ ಇದಾಗಿದ್ದು, ಈ ವರ್ಷವೂ ವಿವಿಧ ಕ್ಷೇತ್ರಗಳಲ್ಲಿ ಅಪರೂಪದ ಸಾಧನೆಗೈದು ರಾಜ್ಯದ ಹೆಗ್ಗಳಿಕೆಯನ್ನು ಇಮ್ಮಡಿಗೊಳಿಸಿರುವ ಸಾಧಕರನ್ನು ಸುವರ್ಣ ಸಾಧಕರು ಪ್ರಶಸ್ತಿ ನೀಡಿ ಗೌರವಿಸಿದೆ.

ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭದ ಸಂಪಾದಕ ರವಿ ಹೆಗಡೆ, ಸುವರ್ಣ ನ್ಯೂಸ್ ಸುದ್ದಿ ಸಂಪಾದಕ ಅಜಿತ್ ಹನುಮಕ್ಕನವರ್, ನಿರೂಪಕಿ ಭಾವನಾ ಉಪಸ್ಥಿತರಿದ್ದು, ಪ್ರಶಸ್ತಿ ಸ್ವೀಕರಿಸಲು ಅನಂತಮೂರ್ತಿ ಹೆಗಡೆ ಅವರ ತಂದೆ ಮಹಾಬಲೇಶ್ವರ ಹೆಗಡೆ, ತಾಯಿ  ಹಾಗೂ ಸಹೋದರ ಜಗದೀಶ್ ಹೆಗಡೆ ಸಮ್ಮುಖದಲ್ಲಿ ಪ್ರಶಸ್ತಿ ಸ್ವೀಕರಿಸಿದ್ದು ವಿಶೇಷವಾಗಿತ್ತು.
error: