
ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಮಂಗಳವಾರದಿAದ ಬೆಂಗಳೂರಿನಲ್ಲಿ ೧೦ ದಿನಗಳ ಕಾಲ ಲಾಕ್ ಡೌನ್ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಂದಿನ ಮಂಗಳವಾರದಿAದ ಬೆಂಗಳೂರಿನಲ್ಲಿ ೧೦ ದಿನದ ಮಟ್ಟಿಗೆ ಲಾಕ್ ಡೌನ್ ಘೋಷಿಸಿ ಸಿಎಂ ಯಡಿಯೂರಪ್ಪ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂದು ನಡೆದ ಸಿಎಂ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತಂತೆ ತಮ್ಮ ನಿವಾಸದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿಗಳು, ಬೆಂಗಳೂರು ಕೊರೋನಾ ಸೋಂಕು ನಿಯಂತ್ರಣದ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದ ಅವರು ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಒಂದು ವಾರಗಳ ಕಾಲ ಸಂಪೂರ್ಣವಾಗಿ ಲಾಕ್ ಡೌನ್ ಜಾರಿ ಮಾಡಲು ನಿರ್ಧರಿಸಿದ್ದಾರೆ.
ಇನ್ನೂ, ಕೊರೊನಾ ಸೋಂಕು ಹೆಚ್ಚಿರುವ ಮೂರು ಜಿಲ್ಲೆಗಳಲ್ಲಿ ಕೂಡ ಲಾಕ್ ಡೌನ್ ಹೇರಲು ಸೋಮವಾರ ನಿರ್ಧರಿಸಲಾಗುವುದು, ಈ ಸಂಬAಧ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಸಿಎಂ ಸೋಮವಾರ ಘೋಷಣೆ ಮಾಡಲಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಡೀ ಕರುನಾಡು ತಲ್ಲಣಗೊಂಡಿದೆ. ರಾಜ್ಯದಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್ ಹೇರುವಂತೆ ಭಾರೀ ಒತ್ತಾಯಗಳು ಕೇಳಿಬಂದಿದೆ.
More Stories
ಶರಾವತಿಯ ನದಿ ತಿರುವಿನ ಮಾರಕ ಯೋಜನೆ
ಸಾಹಿತಿ ಶಿಕ್ಷಕಿ ಜಯಶ್ರೀ ರಾಜು ರವರಿಗೆ ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿ ಭಾಜನ
ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್:ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ