April 19, 2024

Bhavana Tv

Its Your Channel

ಡ್ರಗ್ಸ್ ಮಾಫಿಯಾ : ರಾಗಿಣಿಗೆ ಸಿಸಿಬಿ ಶಾಕ್ “ತುಪ್ಪದ ರಾಣಿ” ನಿವಾಸದ ಮೇಲೆ ಸಿಸಿಬಿ ದಾಳಿ.

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾದ ಬೆನ್ನು ಬಿದ್ದಿರುವ ಸಿಸಿಬಿ ಪೊಲೀಸರು ನಟಿ ರಾಗಿಣಿ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಅಂಜುಮಾಲಾ ನಾಯಕ್ ನೇತೃತ್ವದ ತಂಡದಿಂದ ದಾಳಿ ನಡೆದಿದ್ದು, ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾದಲ್ಲಿ ನಟಿ ರಾಗಿಣಿ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಪ್ಟೆಂಬರ್ 3ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿತ್ತು. ಆದರೆ ರಾಗಿಣಿ ವಿಚಾರಣೆಗೆ ಹಾಜರಾಗಲು ಒಂದು ವಾರಗಳ ಕಾಲಾವಕಾಶವನ್ನು ಕೇಳಿದ್ದರು. ಆದರೂ ಸಿಸಿಬಿ ಇಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದರು. ಆದ್ರೆ ಇಂದು ಬೆಳ್ಳಂಬೆಳಗ್ಗೆಯೇ ಸಿಸಿಬಿ ಅಧಿಕಾರಿಗಳು ನಟಿ ರಾಗಿಣಿಗೆ ಶಾಕ್ ಕೊಟ್ಟಿದ್ದಾರೆ.

ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಬೆಂಗಳೂರಿನ ಯಲಹಂಕದ ನ್ಯೂಟೌನ್ ನಲ್ಲಿರುವ ದಾಳಿ ನಡೆಸಿರುವ ಸಿಸಿಬಿ ಅಧಿಕಾರಿಗಳು ಮನೆಯಲ್ಲಿ ಇಂಚಿಂಚೂ ಪರಿಶೀಲನೆಯನ್ನು ನಡೆಸುತ್ತಿದೆ. ಮಹಿಳಾ ಅಧಿಕಾರಿಗಳ 2 ತಂಡದಿಂದ ಶೋಧ ಕಾರ್ಯ ನಡೆಯುತ್ತಿದ್ದು, ಡ್ರಗ್ಸ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಯಾವುದಾದ್ರೂ ಕ್ಲೂ ಸಿಗಬಹುದಾ ಅನ್ನುವ ನಿಟ್ಟಿನಲ್ಲಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಸಿಸಿಬಿ ಅಧಿಕಾರಿಗಳ ದಾಳಿಯ ಸಂದರ್ಭದಲ್ಲಿ ರಾಗಿಣಿ ಮನೆಯಲ್ಲಿಯೇ ಇದ್ದರು ಎನ್ನಲಾಗುತ್ತಿದೆ. ರಾಗಿಣಿ ಡ್ರಗ್ಸ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಗಳನ್ನು ನಾಶಪಡಿಸದಂತೆ ಸಿಸಿಬಿ ಅಧಿಕಾರಿಗಳು ಮನೆಯ ಒಳಗೆ ಹಾಗೂ ಹೊರಗೆ ಪರಿಶೀಲನೆ ನಡೆಯುತ್ತಿದೆ.
ರಾಗಿಣಿ ಆಪ್ತ ರವಿಶಂಕರ್ ಬಂಧನದ ಬೆನ್ನಲ್ಲೇ ರಾಗಿಣಿ ನಿವಾಸದ ಮೇಲೆ ಈ ದಾಳಿ ನಡೆದಿದೆ. ದಾಳಿಯ ವೇಳೆಯಲ್ಲಿ ಮಹತ್ವದ ದಾಖಲೆಗಳು ಲಭ್ಯವಾಗಿದೆ. ರವಿಶಂಕರ್ ನೀಡಿರುವ ಮಾಹಿತಿಯನ್ನು ಆಧರಿಸಿಯೇ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ತಪಾಸಣೆಯನ್ನು ಮುಂದುವರಿಸಿದ್ದಾರೆ. ರಾಗಿಣಿ ಅವರನ್ನು ಮನೆಯಿಂದಲೇ ವಶಕ್ಕೆ ಪಡೆಯುವ ಸಾಧ್ಯತೆಗಳು ದಟ್ಟವಾಗಿದೆ

error: