April 20, 2024

Bhavana Tv

Its Your Channel

ನ.17ರಿಂದ ರಾಜ್ಯಾಧ್ಯಂತ ಡಿಗ್ರಿ, ಇಂಜಿನಿಯರಿಂಗ್, ಡಿಪ್ಲೊಮಾ ತರಗತಿ ಆರಂಭ – ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್

ಬೆಂಗಳೂರು,: ನವೆಂಬರ್ 17 ರಿಂದ ಪದವಿ ಕಾಲೇಜುಗಳನ್ನು ಪುನರಾರಂಭಿಸುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ.

ನವೆಂಬರ್ 17ರಿಂದ ಪದವಿ ತರಗತಿಗಳು, ಎಂಜನಿಯರಿಂಗ್ ಹಾಗೂ ಡಿಪ್ಲೊಮಾ ಕಾಲೇಜುಗಳಲ್ಲಿ ಪಠ್ಯ ಚಟುವಟಿಕೆಗಳನ್ನು ಆರಂಭಿಸಲಾಗುವುದು ಎಂದು ಅಶ್ವತ್ಥ ನಾರಾಯಣ ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಆದರೆ ವಿದ್ಯಾರ್ಥಿಗಳು ಪಾಠ ಕೇಳಲು ತರಗತಿಗೆ ಹಾಜರಾಗುವುದು ಕಡ್ಡಾಯವಲ್ಲ.

ಕಾಲೇಜಿಗೆ ಬಂದು ಪಾಠ ಕೇಳುವುದು ವಿದ್ಯಾರ್ಥಿಗಳ ಇಚ್ಛೆಗೆ ಬಿಟ್ಟಿರುತ್ತದೆ. ಸ್ವಯಂ ಪ್ರೇರಣೆಯಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಬಹುದು. ಅದಕ್ಕೆ ಅವರು ಒಪ್ಪಿಗೆ ಪತ್ರವನ್ನು ನೀಡಬೇಕು. ವಿದ್ಯಾರ್ಥಿಗಳು ಮತ್ತು ಪೋಷಕರು ಒಪ್ಪಿಗೆ ಇದ್ದರೆ ಮಾತ್ರ ಕಾಲೇಜಿಗೆ ಬರಬಹುದು. ಯಾರಿಗೂ ಕಾಲೇಜಿಗೆ ಬರುವಂತೆ ಬಲವಂತ ಮಾಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಕಾಲೇಜಿಗೆ ಬರಲು ಬಯಸದ ವಿದ್ಯಾರ್ಥಿಗಳು ಆನ್‌ಲೈನ್ ತರಗತಿಗಳಿಗೆ ಹಾಜರಾಗಬಹುದು. ಕಾಲೇಜಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ಶಿಫ್ಟ್ ಅಥವಾ ಬ್ಯಾಚ್ ಆಧಾರದಲ್ಲಿ ತರಗತಿಗಳನ್ನು ನಡೆಸುವ ಬಗ್ಗೆ ತೀರ್ಮಾನ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಯುಜಿಸಿ ನೀಡಿರುವ ಮಾರ್ಗಸೂಚಿಗಳು ಹಾಗೂ ಕೋವಿಡ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ತರಗತಿಗಳನ್ನು ನಡೆಸಲಾಗುತ್ತದೆ. ಕಾಲೇಜುಗಳ ನಿರ್ವಹಣೆ ಬಗ್ಗೆ ಪ್ರತಿ ಕಾಲೇಜಿನಲ್ಲಿಯೂ ಟಾಸ್ಕ್ ಫೋರ್ಸ್ ರಚನೆಗೆ ಸೂಚಿಸಲಾಗಿದೆ. ಹಾಸ್ಟೆಲ್‌ಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆಗೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

source:Oneindia

error: