March 28, 2024

Bhavana Tv

Its Your Channel

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಪ್ರಕಟ: ಎರಡು ಹಂತಗಳಲ್ಲಿ ಮತದಾನ

ಬೆಂಗಳೂರು : ರಾಜ್ಯದ ಗ್ರಾಮಪಂಚಾಯಿತಿ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಡಿಸೆಂಬರ್ 22 ಮತ್ತು 27 ರಂದು ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಘೋಷಣೆ ಮಾಡಿದೆ.

ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯದಲ್ಲಿ 2 ಹಂತಗಳಲ್ಲಿ ಒಟ್ಟು 5,762 ಗ್ರಾಮಪಂಚಾಯಿತಿಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿದೆ. ರಾಜ್ಯದ ಒಟ್ಟು 5,762 ಗ್ರಾಮಪಂಚಾಯಿತಿಗಳಿಗೆ ಡಿಸೆಂಬರ್ 22 ಮತ್ತು 27 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಘೋಷಣೆ ಮಾಡಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 30 ಕ್ಕೆ ಫಲಿತಾಂಶ ಪ್ರಕಟವಾಗಲಿದ್ದು, ಡಿಸೆಂಬರ್ 31 ರ ವರೆಗೆ ನೀತಿ ಸಂಹಿತೆ ಜಾರಿಯಲ್ಲಿರಲಿದೆ.

ಡಿಸೆಂಬರ್ 7 ರಿಂದ ಮೊದಲ ಹಂತದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಡಿಸೆಂಬರ್ 11 ಕೊನೇ ದಿನವಾಗಿದೆ. ರಾಜ್ಯದಲ್ಲಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಕೋವಿಡ್-19 ನಿಯಮ ಕಡ್ಡಾಯ ಮಾಡಲಾಗಿದ್ದು, ಕೆಲವು ಕಡೆ ಮತದಾನಕ್ಕೆ ಇವಿಎಂ ಬಳಸಲು ನಿರ್ಧರಿಸಲಾಗಿದೆ.

source:Kannada News Now

error: