April 19, 2024

Bhavana Tv

Its Your Channel

ಎಸ್.‌ಎಸ್.‌ಎಲ್. ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ: ಜೂನ್ 14ರಿಂದ ಪರೀಕ್ಷೆ ಆರಂಭ.

ಬೆಂಗಳೂರು : ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ತಾತ್ಕಾಲಿಕವಾಗಿ ದಿನಾಂಕ ನಿಗದಿ ಪಡಿಸಲಾಗಿದೆ. ಜೂನ್ 14 – 06-2021ರಿಂದ 25-06-2021ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು, ಜೂನ್.14ರಂದು ಪ್ರಥಮ ಭಾಷೆ, ಜೂನ್ 16 ಗಣಿತ ಪರೀಕ್ಷೆ, ಜೂನ್ 18ರಂದು ಇಂಗ್ಲೀಷ್ ಹಾಗೂ ಕನ್ನಡ, ಜೂನ್ 21ರಂದು ವಿಜ್ಞಾನ, ಜೂನ್ 23ರಂದು ಹಿಂದಿ ಹಾಗೂ ಜೂನ್ 25ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಇದು ತಾತ್ಕಾಲಿಕ ಪರೀಕ್ಷಾ ವೇಳಾ ಪಟ್ಟಿಯಾಗಿದ್ದು, ಯಾವುದೇ ವಿದ್ಯಾರ್ಥಿ, ಪೋಷಕರಿಗೆ ಆಕ್ಷೇಪಗಳಿದ್ದರೇ ತಿಳಿಸುವಂತೆ 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂಬುದಾಗಿ ತಿಳಿಸಿದರು.

1 ರಿಂದ 5ರವರೆಗೆ ವಿದ್ಯಾಗಮ ವಿಸ್ತರಿಸುವ ಬಗ್ಗೆಯೂ ಕೋವಿಡ್ ತಾಂತ್ರಿಕ ಸಮಿತಿ ತಿಳಿಸಿದೆ. ಇವತ್ತು ಬಹಳಷ್ಟು ಚರ್ಚೆಯಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿನ ಪರಿಸ್ಥಿತಿ ಚರ್ಚೆ ಮಾಡಿ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನೀಡಿರುವಂತ ಮಾಹಿತಿಯ ಅನುಸಾರವಾಗಿ, ಫೆಬ್ರವರಿ 1ನೇ ತಾರೀಕಿನಿಂದ ಹೈಸ್ಕೂಲ್ ನಿಂದ 9ನೇ ತರಗತಿ, ಎಸ್ ಎಸ್ ಎಲ್ ಸಿ, ಪ್ರಥಮ ಪಿಯುಸಿ ಅರ್ಧ ದಿನದ ಬದಲಾಗಿ ಪೂರ್ಣ ದಿನದ ಅವಧಿಯಲ್ಲಿ ತರಗತಿ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸದರು.

source: Kannada News Now

error: