April 22, 2021

Bhavana Tv

Its Your Channel

ಸುಪ್ರೀಂ ಕೋರ್ಟ್ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ನೇಮಕ

ನವದೆಹಲಿ, ಏಪ್ರಿಲ್ 6: ನಿರೀಕ್ಷೆಯಂತೆಯೇ ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ (ಸಿಜೆಐ) ಎನ್‌ವಿ ರಮಣ ಅವರನ್ನು ನೇಮಿಸಲಾಗಿದೆ. ಹಾಲಿ ಸಿಜೆಐ ಶರದ್ ಅರವಿಂದ್ ಬೋಬ್ಡೆ ಅವರ ಅಧಿಕಾರಾವಧಿ ಏಪ್ರಿಲ್ 23ರಂದು ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಅವರ ಉತ್ತರಾಧಿಕಾರಿಯನ್ನಾಗಿ ಎನ್‌ವಿ ರಮಣ ಅವರನ್ನು ನೇಮಕ ಮಾಡಲಾಗಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಈ ಸಂಬಂಧ ಆದೇಶ ಹೊರಡಿಸಿದ್ದು, ಏಪ್ರಿಲ್ 24ರಿಂದ ಜಾರಿಯಾಗುವಂತೆ ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ ಎನ್‌ವಿ ರಮಣ ಅವರನ್ನು ನೇಮಕ ಮಾಡಲಾಗಿದೆ.

ಆಂಧ್ರಪ್ರದೇಶ ಮೂಲದ ನೂತಲಪತಿ ವೆಂಕಟ ರಮಣ ಅವರು ಸುಪ್ರೀಂಕೋರ್ಟ್‌ನ 48ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದು, ಅವರು 2022ರ ಆಗಸ್ಟ್ 26ರಂದು ನಿವೃತ್ತರಾಗಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೋಬ್ಡೆ ಅವರು ಸಂಪ್ರದಾಯದಂತೆ ತಮ್ಮ ನಂತರದ ಅತಿ ಹಿರಿಯ ನ್ಯಾಯಮೂರ್ತಿ ಎನ್‌ವಿ ರಮಣ ಹೆಸರನ್ನು ಮುಂದಿನ ಸಿಜೆಐ ಹುದ್ದೆಗೆ ಕಳೆದ ತಿಂಗಳು ಶಿಫಾರಸು ಮಾಡಿದ್ದರು. ಈ ಶಿಫಾರಸಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ ನೀಡಿದ್ದಾರೆ.

ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದ ಎನ್‌ವಿ ರಮಣ ಅವರನ್ನು 2014ರ ಫೆಬ್ರವರಿ 17ರಂದು ಸುಪ್ರೀಂಕೋರ್ಟ್‌ಗೆ ಪದೋನ್ನತಿ ಮಾಡಲಾಗಿತ್ತು.

source:Oneindia

error: