March 22, 2024

Bhavana Tv

Its Your Channel

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವರಾದ ಡಾ. ಕೆ. ಸುಧಾಕರ ಅವರೊಂದಿಗೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಸಭೆ.

 ಬೆಂಗಳೂರಿನಲ್ಲಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವರಾದ ಡಾ. ಕೆ. ಸುಧಾಕರ ಅವರೊಂದಿಗೆ ವಿಜಯಪುರ ಜಿಲ್ಲೆಯ ಉಸ್ತುವಾರಿ ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ  ಯವರು ಸಭೆ ಸೇರಿ, ವಿಜಯಪುರ ಜಿಲ್ಲೆಯ ಕೋವಿಡ್ ಪ್ರಸ್ತುತ ಸ್ಥಿತಿಗತಿಗಳ ಕುರಿತು ಮಾಹಿತಿ ನೀಡಿ, ಸಮಾಲೋಚಿಸಿದರು.

ಜಿಲ್ಲೆಯ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಅತ್ಯಾಧುನಿಕ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು ೧೦೦ ಬೆಡ್ ಗಳ ಕೋವಿಡ್ ಕೇರ್ ಆಸ್ಪತ್ರೆಯನ್ನಾಗಿ ಪರಿವರ್ತಿಸಿ, ಸೋಂಕಿತರ ಚಿಕಿತ್ಸೆಗೆ ಅನುಕೂಲ ಮಾಡಿಕೊಡುವಂತೆ, ಸಮುದಾಯ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಸೌಲಭ್ಯ, ಬಸವನಬಾಗೆವಾಡಿ ತಾಲ್ಲೂಕಿನ ಕೂಡಗಿಯ ಎನ್.ಟಿ.ಪಿ.ಸಿ. ಘಟಕದಲ್ಲಿ ೧೦೦ ಹಾಸಿಗೆಗಳ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ, ಸಿಂಧಗಿ  ಹಾಗೂ ತಾಳಿಕೋಟೆ ತಾಲೂಕ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆ, ಹಾಗೂ ರೆಮಡಿಸಿವಿರ್ ಲಸಿಕೆಗೆ ಹೆಚ್ಚಿನ ಬೇಡಿಕೆಯಿದ್ದು, ಬೇಡಿಕೆ ನೀಗಿಸಲು ಅಗತ್ಯ ಲಸಿಕೆಗಳನ್ನು ಸರಬರಾಜು ಮಾಡುವುದರ ಕುರಿತು ಮನವಿ ಸಲ್ಲಿಸಿದರು. 

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಅರುಣ ಶಹಾಪುರ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಅಶೋಕ ಅಲ್ಲಾಪುರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
error: