May 7, 2024

Bhavana Tv

Its Your Channel

ಗ್ರಾಮದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಆದರ್ಶ ರೈತರಿಗೆ ಸನ್ಮಾನ

ಗ್ರಾಮದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಯವರು ಆದರ್ಶ ರೈತರನ್ನು ಸನ್ಮಾನಿಸಿ, ಅವರ ಶ್ರಮಕ್ಕೆ ಗೌರವ ಸಲ್ಲಿಸಿದರು.

ಬೆಳಗಾವಿ ; ನಿಪ್ಪಾಣಿ ಮತಕ್ಷೇತ್ರದ ಕಾರದಗಾ ಗ್ರಾಮದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಹಾಗೂ ಕೃಷಿ ಇಲಾಖೆ ಚಿಕ್ಕೋಡಿಯ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಕಿಸಾನ್ ಸಪ್ತಾಹ ಕಾರ್ಯಕ್ರಮದಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ವಿಭಾಗದ ರಾಷ್ಟ್ರೀಯ ಸಂಚಾಲಕರಾದ ಪೂಜ್ಯ ರಾಜಯೋಗಿನಿ ಬ್ರಹ್ಮಕುಮಾರಿ ಸುನಂದಾ ದೀದಿ ಜಿ ಅವರ ದಿವ್ಯಸಾನಿಧ್ಯದಲ್ಲಿ ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಯವರು ಭಾಗವಹಿಸಿ, ನಿಪ್ಪಾಣಿ ಮತಕ್ಷೇತ್ರದ 10 ಜನ ಆದರ್ಶ ರೈತರನ್ನು ಸನ್ಮಾನಿಸಿ, ಅವರ ಶ್ರಮಕ್ಕೆ ಗೌರವ ಸಲ್ಲಿಸಿದರು.

ರೈತರು ಸಾವಯುವ ಹಾಗೂ ಜೈವಿಕ ಕೃಷಿ ಪದ್ಧತಿಗೆ ಹೆಚ್ಚಿನ ಮಹತ್ವ ನೀಡಬೇಕು. ಇದರಿಂದ ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಮಲಿನವಾದ ಭೂಮಿಗೆ ಮತ್ತೆ ಹೊಸ ಶಕ್ತಿ ಕೊಡುವ ಕಾರ್ಯ ಮಾಡಬೇಕು ಎಂದು ಸಂದೇಶ ನೀಡಿದರು. ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಸನ್ಯಾನ್ಮ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಜಿ ಅವರ ನೇತೃತ್ವದ ಬಿಜೆಪಿ ಸರ್ಕಾರ ರೈತರ ಆದಾಯವನ್ನು ದ್ವಿಗುಣಗೊಳಿಸಲು ರೈತ ಉತ್ಪಾದಕ ಸಂಸ್ಥೆ, ಒಂದು ಜಿಲ್ಲೆ ಒಂದು ಉತ್ಪನ್ನ, ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಹೀಗೆ ವಿವಿಧ ರೈತಪರ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಎಲ್ಲಾ ಯೋಜನೆಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ಜಂಟಿ ನಿರ್ದೇಶಕರಾದ ಶ್ರೀ ಮಂಜುನಾಥ ಜನಮಟ್ಟಿ, ಸ್ಥಳೀಯ ಮುಖಂಡರು, ಗಣ್ಯರು, ರೈತ ಬಾಂಧವರು ಉಪಸ್ಥಿತರಿದ್ದರು.

error: