April 30, 2024

Bhavana Tv

Its Your Channel

ಇಟಗಿ ಗ್ರಾಮದ ಏತ ನೀರಾವರಿ ಯೋಜನೆಯ ಪುನರುತ್ಥಾನದ ಕಾಮಗಾರಿಗೆ ಚಾಲನೆ ನೀಡಿದ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಇಟಗಿ ಗ್ರಾಮದಲ್ಲಿ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆಯ ವತಿಯಿಂದ ೪೭೦೨ ಏತ ನೀರಾವರಿ ಯೋಜನೆಯ ಅಡಿಯಲ್ಲಿ ಅಂದಾಜು ೭೨೦ ಲಕ್ಷ ವೆಚ್ಚದಲ್ಲಿ ಇಟಗಿ ಗ್ರಾಮದ ಏತ ನೀರಾವರಿ ಯೋಜನೆಯ ಪುನರುತ್ಥಾನ ಕಾಮಗಾರಿಗೆ ಖಾನಾಪುರ ವಿಧಾನ ಸಭಾ ಕ್ಷೇತ್ರದ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ರವರು ಚಾಲನೆ ನೀಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಡಾ. ಅಂಜಲಿ ನಿಂಬಾಳ್ಕರ್ ಖಾನಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾನು ಯಾವುದೇ ಹೋರಾಟಕ್ಕೂ ಸಿದ್ಧಳಿದ್ದೇನೆ ಎಂದು ಹೇಳಿದರು.
ಸಣ್ಣ ನೀರಾವರಿ ಇಲಾಖೆ ವೃತ್ತದ ಅಧೀಕ್ಷಕ ಅಭಿಯಂತರರು ಆದ ಸತೀಶ್ ಮಾರ್ಗದರ್ಶನದಲ್ಲಿ ನಡೆದ ಈ ರೈತಪರ ಯೋಜನೆಯ ಕಾರ್ಯಕ್ರಮದಲ್ಲಿ ಖಾನಾಪುರ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಆದ ಸಂತೋಷ್ ಕುಮಾರ್ ಮಾಳಗಿ, ಗುತ್ತಿಗೆದಾರರು ಆದ ಸಂತೋಷ್ ಗಾಣಿಗೇರ, ಸಣ್ಣ ನೀರಾವರಿ ಅಭಿಯಂತರ ವಸ್ತ್ರದ, ಪಿ.ಡಿ.ಓ ಚರಕಿ ಸೇರಿದಂತೆ ಇಟಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸೇರಿದಂತೆ ಸರ್ವ ಸದಸ್ಯರು, ಕಸಾಪ ಅಧ್ಯಕ್ಷರು, ಗ್ರಾಮದ ಹಿರಿಯರು, ಹಾಗೂ ಕರವಿನ ಕೊಪ್ಪ, ಬೋಗುರು, ಚಿಕ್ಕ ಮುನವಳ್ಳಿ, ಪಾರಿಶ್ವಾಡ ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು. ಸಣ್ಣ ನೀರಾವರಿ ಇಲಾಖೆ ಅಧೀನದ ಈ ಯೋಜನೆಗೆ ಚಾಲನೆ ದೊರೆತಿದ್ದು ಇಟಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನತೆಯಲ್ಲಿ ಮಂದಹಾಸ ಬೀರಿದೆ.

error: