April 23, 2024

Bhavana Tv

Its Your Channel

ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ಅಡಿಯಲ್ಲಿ ಪೂರಕ ಪೌಷ್ಟಿಕ ಆಹಾರ ವಿತರಣೆ

ಚಿಕ್ಕೊಡಿ ; ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ಅಡಿಯಲ್ಲಿ ಸನ್ 2022-23 ನೇ ಸಾಲಿನ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ಸರ್ಕಾರದ ಆದೇಶದಂತೆ ಕಾಗವಾಡ ಪಟ್ಟಣದ ಸರ್ಕಾರಿ ಶಾಲೆಯ 1ರಿಂದ 8ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದೊಂದಿಗೆ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕಿಯನ್ನು ಕಾಗವಾಡ ಮತಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ (ತಾತ್ಯಾ) ಪಾಟೀಲ ಅವರು ಸಾಂಕೇತಿಕವಾಗಿ ಮೊಟ್ಟೆ ಹಾಗೂ ಬಾಳೆಹಣ್ಣು ಮತ್ತು ಚಕ್ಕಿಯನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಸಮಯದಲ್ಲಿ ಶಾಸಕರು ಮಾತನಾಡಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿಯಲ್ಲಿ ಸನ್ 2022- 23 ನೇ ಸಾಲಿಗೆ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 8 ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿ ಊಟದೊಂದಿಗೆ ಬೇಯಿಸಿದ ಮೊಟ್ಟೆ ಹಾಗೂ ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕಿಯನ್ನು ವಿತರಿಸಲಾಗಿದ್ದು, ಇವತ್ತು ನಾವು ಕಾಗವಾಡ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ವಿತರಿಸಿದ್ದು, ಅದೇ ರೀತಿ ನಮ್ಮ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿಯ ಪ್ರತಿಯೊಂದು ಸರ್ಕಾರಿ ಶಾಲೆಯ ಮಕ್ಕಳಿಗೆ ವಿತರಿಸಲಾಗುವುದು. ಶಿಕ್ಷಕರು ಮಕ್ಕಳಿಗೆ ವ್ಯವಸ್ಥಿತವಾಗಿ ಉತ್ತಮ ಗುಣಮಟ್ಟದ ಮೊಟ್ಟೆ ಹಾಗೂ ಬಾಳೆಹಣ್ಣುಗಳನ್ನು ವಿತರಿಸಲು ಸೂಚನೆ ನೀಡಿದರು.

ಈ ಸಮಯದಲ್ಲಿ ಕಾಗವಾಡ ತಹಶೀಲ್ದಾರ್ ರಾಜೇಶ್ ಬುರ್ಲಿ, ಕಾಗವಾಡ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಪ್ಪಾ ಮುಂಜೆ, ಕಾಗವಾಡ ತಾಲೂಕ ವೈದ್ಯಾಧಿಕಾರಿ ಡಾಕ್ಟರ್ ಪುಷ್ಪಲತಾ ಸುಣ್ಣದಕಲ ಹಾಗೂ ಹಲವಾರು ಸ್ಥಳೀಯ ಮುಖಂಡರು, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಹಾಗೂ ಕಾರ್ಯಕರ್ತರು, ಶಾಲೆಯ ಮುದ್ದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ ; ಮಹೇಶ ಶರ್ಮಾ, ಬೆಳಗಾವಿ

error: