July 13, 2024

Bhavana Tv

Its Your Channel

ಬುಡಕಟ್ಟು ಸಿದ್ಧಿ ಸಮುದಾಯದವರ ವಿವಿಧ ಬೇಡಿಕೆಗಳ ಕುರಿತು ಸುವರ್ಣಸೌಧದಲ್ಲಿ ಸಚಿವ ಶಿವರಾಮ ಹೆಬ್ಬಾರ ರವರು ಮುಖ್ಯಮಂತ್ರಿಗೆ ಮನವಿ

ಬೆಳಗಾವಿ : ಬುಡಕಟ್ಟು ಸಿದ್ಧಿ ಸಮುದಾಯದವರ ವಿವಿಧ ಬೇಡಿಕೆಗಳ ಕುರಿತು ಸುವರ್ಣಸೌಧದಲ್ಲಿ ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಬುಡಕಟ್ಟು ಸಿದ್ದಿ ಸಮುದಾಯದವರು ಉತ್ತರ ಕನ್ನಡ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ದಟ್ಟ ಅರಣ್ಯದಲ್ಲಿ ವಾಸವಾಗಿದ್ದು ಸರಕಾರದ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಈ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಹಮ್ಮಿಕೊಳ್ಳಬಹುದಾದ ಕಾರ್ಯಕ್ರಮವನ್ನು ಹಾಗೂ ಸಮುದಾಯದ ಬಹುಮುಖ್ಯ ಬೇಡಿಕೆಗಳನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದರು.ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿದ್ಧಿ ಸಮುದಾಯದ ಪ್ರಮುಖರಾದ ರಾಮನಾಥ ಸಿದ್ಧಿ, ಸಾವೇರ್ ಸಿದ್ಧಿ, ಇಬ್ರಾಹಿಂ ಗುಂಜಾವತಿ, ವನಶ್ರೀ ಗಿರಿಜನ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘ ಹಳಿಯಾಳದ ಅಧ್ಯಕ್ಷರು, ಪ್ರದಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.

error: