May 3, 2024

Bhavana Tv

Its Your Channel

ಮೇ. ೧೦ ರ ತನಕ ಸೂರಿಲ್ಲದವರಿಗೆ ಅರ್ಜಿ ಸಲ್ಲಿಸಲು ಅವಕಾಶ

ನಿಪ್ಪಾಣಿ: ನಿಪ್ಪಾಣಿ ನಗರದಲ್ಲಿ, ಜಿ+೨ ಮಾದರಿಯ ೨೦೫೨ ಮನೆಗಳ ನಿರ್ಮಾಣದ ಅಡಿಪಾಯ ಕಾಮಗಾರಿ ಪೂರ್ಣಗೊಂಡಿದ್ದು, ಸ್ಥಳಕ್ಕೆ ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಪ್ರಗತಿ ಕಾರ್ಯವನ್ನು ಪರಿಶೀಲನೆ ನಡೆಸಿದರು.

ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮಂಜೂರಾದ ೧೪೬.೫೧ ಕೋಟಿ ರೂ. ಮೊತ್ತದಲ್ಲಿ ಈ ನಿವೇಶನ ನಿರ್ಮಾಣವಾಗುತ್ತಿದೆ. ನಿವೇಶನ ಇಲ್ಲದವರಿಗೆ ಮೇ. ೧೦ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿಗಳನ್ನು ಪರಿಶೀಲಿಸಿ ಫಲಾನುಭವಿಗಳಿಗೆ ಸೂರು ವ್ಯವಸ್ಥೆ ಕಲ್ಪಿಸಲಾಗುವುದು. ಉತ್ತಮ ಗುಣಮಟ್ಟದೊಂದಿಗೆ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುಂತೆ ಅಧಿಕಾರಿಗಳಿಗೆ ಸೂಚಿಸಿದರು.

ವರದಿ: ಮಹೇಶ ಶರ್ಮಾ. ಬೆಳಗಾವಿ

error: