April 20, 2024

Bhavana Tv

Its Your Channel

ಖಾಸಗಿ ಸಹಭಾಗಿತ್ವದಲ್ಲಿ ಎಲ್ಲಾ ಜಿಲ್ಲೆಗಳಿಗೂ ಆಕ್ಸಿಜನ್ ಬಸ್ ಒದಗಿಸಲು ಸಿದ್ಧ

ಅಥಣಿ ; ಜಿಲ್ಲಾ ಮಟ್ಟಗಳಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಅಥವಾ ಆರೋಗ್ಯ ಕ್ಷೇತ್ರಕ್ಕೆ ಸಂಬAಧಪಟ್ಟ ಸಂಘ-ಸAಸ್ಥೆಗಳು, ಆಸ್ಪತ್ರೆಗಳು ಪ್ರಾಯೋಜಕತ್ವ ( ಸ್ಪಾನ್ಸರ್) ನೀಡಿದರೆ ಎಲ್ಲ ಜಿಲ್ಲೆಗಳಲ್ಲಿಯೂ ನಮ್ಮ ನಾಲ್ಕೂ ಸಾರಿಗೆ ನಿಗಮಗಳಿಂದ ಆಕ್ಸಿಜನ್ ಬಸ್ ಸೌಲಭ್ಯ ಒದಗಿಸಲು ಸಿದ್ಧ ಎಂದು ಸಚಿವ ಸವದಿ ತಿಳಿಸಿದ್ದಾರೆ..

ಒಂದು ಬಸ್ಸಿನಲ್ಲಿ ಆರರಿಂದ ಹತ್ತು ಮಂದಿಗೆ ಆಕ್ಸಿಜನ್ ಪೂರೈಕೆ ಮಾಡುವುದು ಸಾಧ್ಯ. ಪ್ರಸ್ತುತ ಬಹುತೇಕ ಆಸ್ಪತ್ರೆಗಳಲ್ಲಿ ರೋಗಿಗಳ ದಟ್ಟಣೆ ಜಾಸ್ತಿಯಾಗಿರುವುದರಿಂದ ಸಹಜವಾಗಿಯೇ ಆಕ್ಸಿಜನ್ ಪೂರೈಕೆ ಕಷ್ಟಸಾಧ್ಯವಾಗುತ್ತಿದೆ. ಆದರೆ ಆಕ್ಸಿಜನ್ ಪೂರೈಸುವ ಉಪಕರಣಗಳನ್ನು ಅಳವಡಿಸಿರುವ ಬಸ್ಸುಗಳನ್ನು ಆಸ್ಪತ್ರೆಗಳ ಬಳಿ ನಿಲ್ಲಿಸಿದರೆ ರೋಗಿಗಳಿಗೆ ತುರ್ತಾಗಿ ಬಂದು ಅಲ್ಲಿ ವಿಶ್ರಮಿಸಲು ಮತ್ತು ಆಕ್ಸಿಜನ್ ಪಡೆದು ತಮ್ಮ ಜೀವ ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಇಂಥಾ ಪ್ರಯೋಗಗಳು ಈಗಾಗಲೇ ಬೆಂಗಳೂರಿನಲ್ಲಿ ಯಶಸ್ಸು ಕಂಡಿವೆ.

ಒಂದು ವೇಳೆ ಸ್ವಯಂಸೇವಾ ಸಂಸ್ಥೆಗಳು ಆರೋಗ್ಯ ಸಿಬ್ಬಂದಿಗಳೊAದಿಗೆ ಆಕ್ಸಿಜನ್ ಪೂರೈಸುವ ಉಪಕರಣಗಳನ್ನು ಒದಗಿಸಿಕೊಟ್ಟರೆ ಉಚಿತವಾಗಿ ಬಸ್ಸುಗಳನ್ನು ಮತ್ತು ಚಾಲಕರನ್ನು ನಮ್ಮ ಸಾರಿಗೆ ನಿಗಮಗಳಿಂದ ನೀಡಲು ಕ್ರಮ ಕೈಗೊಳ್ಳಲಾಗುವುದು. ಈ ಹಿನ್ನಲೆಯಲ್ಲಿ ಬೇಡಿಕೆಗಳಿಗೆ ಅನುಗುಣವಾಗಿ ಆಕ್ಸಿ ಬಸ್ಸುಗಳನ್ನು ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಈಗಾಗಲೇ ನಮ್ಮ ನಾಲ್ಕೂ ಸಾರಿಗೆ ನಿಗಮಗಳಿಗೆ ಸೂಚಿಸಿದ್ದೇನೆ.

ಈ ಬಗ್ಗೆ ಅಗತ್ಯವಿದ್ದವರು ಆಯಾ ಜಿಲ್ಲೆಗಳ ಸಾರಿಗೆ ನಿಗಮಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಹೈದರಾಬಾದಿನ ಸೇವಾ ಸಂಸ್ಥೆಯೊAದು ನಮ್ಮ ಸಾರಿಗೆ ನಿಗಮಗಳ ಸಹಯೋಗದಲ್ಲಿ ವ್ಯಾಪಕವಾಗಿ ಆಕ್ಸಿಜನ್ ಬಸ್ಸುಗಳ ಸೇವೆಯನ್ನು ಪ್ರಾರಂಭಿಸಲು ಮುಂದೆ ಬಂದಿದೆ. ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರೊಂದಿಗೂ ಈ ಬಗ್ಗೆ ಚರ್ಚಿಸಲಾಗಿದೆ. ಈ ಜಂಟಿ ಪ್ರಯತ್ನ ಕೈಗೂಡಿದರೆ ರಾಜ್ಯಾದ್ಯಂತ ಮತ್ತಷ್ಟು ಹೆಚ್ಚಿನ ಮಂದಿಗೆ ಉಚಿತ ಆರೋಗ್ಯ ಸೇವೆ ಕಲ್ಪಿಸಲು ಸಾಧ್ಯವಾಗುತ್ತದೆ.

ಚಿಕ್ಕಮಗಳೂರಿನಲ್ಲೂ ಆಕ್ಸಿಜನ್ ಬಸ್ ಸೇವೆ ಪ್ರಾರಂಭ

ಬೆAಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆ. ಎಸ್. ಆರ್. ಟಿ.ಸಿ.ಯು ಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಾಳೆಯಿಂದ ( ಸೋಮವಾರ) ಬಸ್ಸಿನಲ್ಲಿಯೇ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ.

ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದೆ. ಇದರಿಂದಾಗಿ ಹೊಸ ರೋಗಿಗಳು ಆಸ್ಪತ್ರೆಗೆ ಬಂದಾಗ ಅವರಿಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ನೀಡುವುದು ವಿಳಂಬವಾಗಿ ತೀವ್ರ ತೊಂದರೆಯಾಗುತ್ತಿದೆ. ಅಷ್ಟೇ ಅಲ್ಲ, ಆಸ್ಪತ್ರೆಯಲ್ಲಿ ಸ್ಥಳಾಭಾವದಿಂದ ರೋಗಿಗಳಿಗೆ ಅಲ್ಲಿ ಕುಳಿತು ಕಾಯುವುದಕ್ಕೂ ಕಷ್ಟವಾಗುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಉಚಿತವಾಗಿ ಬಸ್ಸಿನಲ್ಲಿಯೇ ತುರ್ತು ಆಕ್ಸಿಜನ್ ಸೌಲಭ್ಯ ಒದಗಿಸಲು ಈ ನೂತನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಆಕ್ಸಿಜನ್ ಪೂರೈಸಲು ಅನುಕೂಲವಾಗುವಂತೆ ವಿಶೇಷವಾಗಿ ವಿನ್ಯಾಸಗೊಳಿಸಿರುವ ಈ ಕೆ.ಎಸ್. ಆರ್. ಟಿ. ಸಿ. ಬಸ್ಸನ್ನು ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನಿಲ್ಲಿಸಲಾಗುವುದು. ಹೊರಗಿನಿಂದ ಕೋವಿಡ್ ಪೀಡಿತರು ಬಂದಾಗ ತಕ್ಷಣಕ್ಕೆ ಆಸ್ಪತ್ರೆಯ ಒಳಗೆ ಆಕ್ಸಿಜನ್ ಸಿಗದಿದ್ದರೆ ಆತಂಕ ಪಡದೇ ಈ ಆಕ್ಸಿಜನ್ ಮೊಬೈಲ್ ಬಸ್ಸಿನಲ್ಲಿಯೇ ತುರ್ತಾಗಿ ವಿಶ್ರಮಿಸಿ ಅಗತ್ಯ ಆಕ್ಸಿಜನ್ ಪಡೆದುಕೊಳ್ಳಲು ಸಾಧ್ಯವಾಗುವಂತೆ ವೈದ್ಯಕೀಯ ಉಪಕರಣಗಳನ್ನು ಇದರಲ್ಲಿ ಅಳವಡಿಸಲಾಗಿದೆ.

ಕೆ. ಎಸ್. ಆರ್. ಟಿ. ಸಿ. ಯ ಈ ನೂತನ ಸೇವೆಯನ್ನು ಖಾಸಗಿ ಸಂಸ್ಥೆಗಳಾದ ನಾಯೋನಿಕ ಐ ಕೇರ್ ಟ್ರಸ್ಟ್, ಸಿಟ್ರಿಕ್ ಇಂಡಿಯಾ ಮತ್ತು ಜಿಲ್ಲಾ ಆಡಳಿತಗಳ ಸಹಯೋಗದಿಂದ ಪ್ರಾರಂಭಿಸಲಾಗುತ್ತಿದೆ.

ಏಕಕಾಲಕ್ಕೆ ಒಟ್ಟು ೮ ಮಂದಿ ರೋಗಿಗಳಿಗೆ ಈ ಬಸ್ಸಿನಲ್ಲಿ ಆಕ್ಸಿಜನ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ.

ಚಾಲಕರು ಮತ್ತು ಸಿಬ್ಬಂದಿಗಳಿಗೆ ಸೋಂಕು ಹರಡದಂತೆ ವಿಶೇಷ ವಿನ್ಯಾಸದೊಂದಿಗೆ ಈ ‘ಆಕ್ಸಿಜನ್ ಆನ್ ವ್ಹೀಲ್ಸ್’ ಬಸ್ಸನ್ನು ಸಜ್ಜುಗೊಳಿಸಲಾಗಿದೆಯಲ್ಲದೇ, ಸ್ಯಾನಿಟೈಸರ್, ಮಾಸ್ಕ್ ಗಳನ್ನು ಇದರಲ್ಲಿ ಒದಗಿಸಲಾಗುವುದು. ಪ್ರತಿ ರೋಗಿಗಳೂ ಸಾಮಾನ್ಯವಾಗಿ ೨ರಿಂದ ೪ ಗಂಟೆಯ ಅವಧಿಯಲ್ಲಿ ಈ ಸೌಲಭ್ಯ ದಿಂದ ತಮಗೆ ಬೇಕಾದ ಅಗತ್ಯ ಪ್ರಮಾಣದ ಆಕ್ಸಿಜನ್ ಪಡೆದುಕೊಳ್ಳಬಹುದಾಗಿದೆ.

ಈ ರೀತಿಯ ವಿಶೇಷ ‘ಆಕ್ಸಿಜನ್ ಬಸ್ ಸೇವೆಯನ್ನು ಬೇಡಿಕೆಗೆ ಅನುಗುಣವಾಗಿ ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸಲು ಸಾರಿಗೆ ನಿಗಮಗಳು ಸಿದ್ಧವಿದೆ.

ಕೋವಿಡ್ ಪ್ರಕರಣಗಳು ವ್ಯಾಪಕವಾಗಿ ಹಬ್ಬುತ್ತ ಆಕ್ಸಿಜನ್ ಗಾಗಿ ಜನರು ಪರಿತಪಿಸುವುದನ್ನು ತಪ್ಪಿಸಲು ಈ ಆಕ್ಸಿಜನ್ ಬಸ್ ಸೇವೆಯು ಸಂಜೀವಿನಿಯAತೆ ವರದಾನವಾಗಲಿದೆ.

ವರದಿ ; ಮಹೇಶ ಶರ್ಮಾ,ಬೆಳಗಾವಿ

error: