December 22, 2024

Bhavana Tv

Its Your Channel

ಗುಂಡ್ಲುಪೇಟೆ ಮಂಡಲದ ಬಿಜೆಪಿ ರೈತ ಮೋರ್ಚಾ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರ ೭೧ನೇ ಜನ್ಮ ದಿನಾಚರಣೆ ಹಾಗೂ ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸಿ ಗಾಂಧೀಜಿ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಮತ್ತು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಎಸ್ ಎಂ ಮಲ್ಲಿಕಾರ್ಜುನ ರವರು, ತಾಲೂಕು ಮಂಡಲ ರೈತ ಮೋರ್ಚಾ ಅಧ್ಯಕ್ಷರಾದ ಶಿವಪುರ ಸಿದ್ದಪ್ಪ, ಹಳೇಪುರ ಸುಂದ್ರಪ್ಪ ,ಮಾಲಾಪುರ ಕುಮಾರ, ಬಿಜೆಪಿ ಹಿರಿಯ ಮುಖಂಡರಾದ ಎಸ್ ಎನ್ ಶಿವಮೂರ್ತಿ, ಗುರುಸ್ವಾಮಿ, ಮೃತ್ಯುಂಜಯ, ಹಂಗಳ ರಾಜಪ್ಪ ,ಚನ್ನಬಸಪ್ಪ , ವೃಷಭೇಂದ್ರ, ಸ್ವಾಮಿ, ಶಿವಪುರ ಗ್ರಾಮ ಪಂಚಾಯಿತಿ ಶಕ್ತಿಕೇಂದ್ರದ ಅಧ್ಯಕ್ಷರಾದ ಸಿದ್ದ ಮಲ್ಲೇಶ್, ಉದಯಕುಮಾರ್, ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ಸುಬ್ಬಪ್ಪ ಸಿದ್ದರಾಜು ,ಪುಟ್ಟಯ್ಯ ಗೋಪಾಲಕೃಷ್ಣ, ಪುಟ್ಟಸ್ವಾಮಿ, ನಮೋ ಮಂಜು, ಪಕ್ಷದ ಹಿರಿಯರು ಹಾಗೂ ಯುವ ಮುಖಂಡರು ಉಪಸ್ಥಿತರಿದ್ದರು

ವರದಿ ಸದಾನ೦ದ ಕನ್ನೆಗಾಲ ಗುಂಡ್ಲುಪೇಟೆ

error: