December 22, 2024

Bhavana Tv

Its Your Channel

ಗುಂಡ್ಲುಪೇಟೆ ಶಾಲೆ ಪ್ರಾರಂಭದ ದಿನದಂದು ಸಿಹಿ ಊಟದೊಂದಿಗೆ ಬಿಸಿಊಟ ಪ್ರಾರಂಭ .

ಚಾಮರಾಜನಗರ : ರಾಜ್ಯದಲ್ಲಿನ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಒಂದರಿoದ ಐದನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳು ಭೌತಿಕವಾಗಿ ಪೂರ್ಣಪ್ರಮಾಣದಲ್ಲಿ ಆರಂಭ ಮಾಡಿದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್.ಸಿ ಶಿವಮೂರ್ತಿ ರವರು ಹಲವಾರು ಶಾಲೆಗಳಿಗೆ ಭೇಟಿ ನೀಡಿ ಸಿಹಿ ಊಟದೊಡನೆ ಬಿಸಿಯೂಟವನ್ನು ಪ್ರಾರಂಭಿಸಿದರು.

ಗುAಡ್ಲುಪೇಟೆ ಪಟ್ಟಣದ ೯೯ ಸರ್ಕಾರಿ ದೊಡ್ಡಹುಂಡಿ ಭೋಗಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಇಲ್ಲಿ ನೆನ್ನೆ ದಿನ ಬಿಸಿಊಟ ಪ್ರಾರಂಭವಾಗಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಕ್ಕಳಿಗೆ ಸಿಹಿ ಊಟವನ್ನು ಬಡಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಊಟಿ ರಸ್ತೆ ಗುಂಡ್ಲುಪೇಟೆ ಗೆ ಭೇಟಿ ನೀಡಿ ಅಡುಗೆಕೋಣೆ ಪರಿಶೀಲನೆ ಮಾಡಿದರು ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಒಟ್ಟು ೧೩೩ ಶಾಲೆಗಳಲ್ಲಿ ಬಿಸಿಯೂಟ ಪ್ರಾರಂಭವಾಗಿದೆ ಎಂದು ಮಾಹಿತಿ ನೀಡಿದರು

ಈ ಸಂದರ್ಭದಲ್ಲಿಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಬಿಸಿಯೂಟದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು

ವರದಿ ಸದಾನ೦ದ ಕನ್ನೆಗಾಲ ಗುಂಡ್ಲುಪೇಟೆ

error: