ಗುಂಡ್ಲುಪೇಟೆ : ಕರ್ನಾಟಕ ಕಾವಲುಪಡೆಯ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಹೊರಾಂಗಣದಲ್ಲಿ ಸಿ.ಸಿ ಕ್ಯಾಮರಾ ಅಳವಡಿಸುವಂತೆ ಆಗ್ರಹಿಸಿದರು.ಈ ಸಂದರ್ಭದಲ್ಲಿ ಕಾವಲುಪಡೆಯ ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಮಾಲಿಕ್ ಮಾತನಾಡಿ ತಾಲೂಕು ಕಚೇರಿಯ ಮುಂಭಾಗದಲ್ಲಿ ಕಚೇರಿ ವೇಳೆಯಲ್ಲಿ ಕೆಲಸಕ್ಕೆ ಬರುವ ಸಾರ್ವಜನಿಕರು ತಮ್ಮ ದ್ವಿಚಕ್ರವಾಹನವನ್ನು ಹೊರಗೆ ನಿಲ್ಲಿಸುತ್ತಾರೆ. ಆದರೆ ವಿಪರ್ಯಾಸವೆಂದರೆ ಒಳಹೋಗಿ ತಮ್ಮ ಕಚೇರಿ ಕೆಲಸವನ್ನು ಮುಗಿಸಿ ಬಂದು ನೋಡಿದಾಗ ವಾಹನಗಳು ಕಳವಾಗಿರುವುದು ತಿಳಿದು ಪೊಲೀಸ್ ಠಾಣೆಗೆ ದೂರು ಸಲ್ಲಿಸುತ್ತಾರೆ. ಆದ್ದರಿಂದ ತಾಲೂಕು ಕಚೇರಿ ಇಲಾಖೆಯವರು ಹೊರಗಡೆ ಸಿಸಿ ಕ್ಯಾಮೆರಾ ಅಳವಡಿಸಿದರೆ ವಾಹನಗಳು ಕಳವುವಾಗುವುದನ್ನು ತಪ್ಪಿಸಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಅಬ್ದುಲ್ ಮಾಲಿಕ್ ಗೌರವಾಧ್ಯಕ್ಷರಾದ ವೆಂಕಟೇಶ್ ಗೌಡ್ರು ಜಿಲ್ಲಾ ಕಾರ್ಯಾಧ್ಯಕ್ಷರಾದ ಅಬ್ದುಲ್ ರಶೀದ್, ಸಲಹೆಗಾರರಾದ ಎಸ್. ಮುಬಾರಕ್, ಸಾಧಿಕ್ ಪಾಷಾ ,ಮಿಮಿಕ್ರಿ ರಾಜು ರವಿಕುಮಾರ್, ಇನ್ನು ಮುಂತಾದವರು ಉಪಸ್ಥಿತರಿದ್ದರು
ವರದಿ: ಸದಾನ೦ದ ಕಣ್ಣೆಗಾಲ ಗುಂಡ್ಲುಪೇಟೆ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.