December 22, 2024

Bhavana Tv

Its Your Channel

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ಕರುನಾಡ ಯುವಶಕ್ತಿ ಅಸ್ತಿತ್ವಕ್ಕೆ.

ಗುಂಡ್ಲುಪೇಟೆ : ಕನ್ನಡದ ಕಣ್ಮಣಿ ಯುವಕರ ಆಶಾಕಿರಣ ಕರುನಾಡ ಯುವಶಕ್ತಿ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಗೌರವಾನ್ವಿತ ವಸಂತಕುಮಾರ್ ಹಾಗೂ ರಾಜ್ಯಾಧ್ಯಕ್ಷರಾದ ಸರವಣ ರವರು ಹಾಗೂ ಗುಂಡ್ಲುಪೇಟೆ ಭಾಗದಲ್ಲಿ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡಿ ತನ್ನದೇ ಛಾಪು ಮೂಡಿಸಿರುವ ಚಾಮರಾಜನಗರ ಜಿಲ್ಲಾ ಅಧ್ಯಕ್ಷರಾದ ಅಶೋಕ ರಾಜ್ ರವರ ನೇತೃತ್ವದಲ್ಲಿ ಗುಂಡ್ಲುಪೇಟೆ ಕರುನಾಡ ಯುವಶಕ್ತಿ ತಾಲೂಕು ಅಧ್ಯಕ್ಷರನ್ನಾಗಿ ಮುನೀರ್ ಪಾಷಾ ರವರನ್ನು ಮತ್ತು ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಯೋಗೇಶ್ ಅವರನ್ನು ನೇಮಕಮಾಡಿ ಆದೇಶ ಪತ್ರ ನೀಡಿದ್ದಾರೆ

ತಾಲೂಕು ಅಧ್ಯಕ್ಷರಾದ ಮುನೀರ್ ಪಾಷಾ ಮಾತನಾಡಿ ಸಂಘಟನೆ ನಮಗೆ ಕೊಟ್ಟಿರುವ ಜವಾಬ್ದಾರಿಯನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸಂಘಟನೆಯನ್ನು ಬೆಳೆಸಿಕೊಂಡು ಹೋಗುತ್ತೇವೆ ಎಂದರು. ಈ ಸಂದರ್ಭದಲ್ಲಿ ಕರುನಾಡ ಯುವಶಕ್ತಿಯ ಪದಾಧಿಕಾರಿಗಳು ಹಾಜರಿದ್ದರು

ವರದಿ: ಸದಾನ೦ದ ಕಣ್ಣೇಗಾಲ ಗು೦ಡ್ಲೂಪೇಟೆ

error: