December 22, 2024

Bhavana Tv

Its Your Channel

ಮಾತಾಡ್ ಮಾತಾಡ್ ಕನ್ನಡ ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ. ಮಾತಾಡ್ ಮಾತಾಡ್ ಕನ್ನಡ. ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನ ಎಂಬ ವಿನೂತನ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದ್ದು ಅದರಂತೆ ತಾಲೂಕು ಮಟ್ಟದ ಗೀತ ಗಾಯನ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ ಗುಂಡ್ಲುಪೇಟೆ ಪಟ್ಟಣದ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆಯಿತು.ನಾಡಗೀತೆಯೊಂದಿಗೆ ೩ ಕನ್ನಡ ಗೀತೆಗಳನ್ನು ಸಾಮೂಹಿಕವಾಗಿ ಹಾಡಲಾಯಿತು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಯಾದ ರವಿಶಂಕರ್, ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀಕಂಠ ರಾ ಜೇ ಅರಸ್, ಕ್ಷೇತ್ರ ಶಿಕ್ಷಣಾಧಿಕಾರಿ ಆದ ಎಸ್ ಸಿ ಶಿವಮೂರ್ತಿ, ಸಂಪನ್ಮೂಲ ಸಮನ್ವಯ ಅಧಿಕಾರಿಯಾದ ಗುರುಸ್ವಾಮಿ,ಮುಖ್ಯ ಶಿಕ್ಷಕರು ಶಾಲಾ ಸಿಬ್ಬಂದಿ ವರ್ಗದವರು ಹಾಗೂ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು

ವರದಿ ಸದಾನ೦ದ ಕಣ್ಣೆಗಾಲ ಗುಂಡ್ಲುಪೇಟೆ

error: