December 19, 2024

Bhavana Tv

Its Your Channel

ಉಚಿತ ಕಣ್ಣಿನ ಪರೀಕ್ಷೆ ಮತ್ತು ಶಸ್ತ್ರ ಚಿಕಿತ್ಸಾ ಅಭಿಯಾನ.

ಗುಂಡ್ಲುಪೇಟೆ: ತಾಲೂಕಿನ ಭೀಮನಬೀಡು ಗ್ರಾಮದಲ್ಲಿಉಚಿತವಾಗಿ ಕಣ್ಣಿನ ಪರೀಕ್ಷೆ ಮತ್ತು ಶಸ್ತ್ರಚಿಕಿತ್ಸೆಗಾಗಿ ಅಭಿಯಾನದ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಅಧ್ಯಕ್ಷರ ನೇತೃತ್ವದಾಲ್ಲಿ ಮತ್ತು ಮೈಸೂರು ಜೆಎಸ್‌ಎಸ್ ಆಸ್ಪತ್ರೆ ಸಹಯೋಗದಿಂದ ನಡೆಯಿತು. ನಂತರ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಿಜಿ ಶಿವಕುಮಾರ್ ಮಾತನಾಡಿ ನಾನು ನನ್ನ ಕಳೆದ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ತಿಳಿಸಿರುವಂತೆ ನಡೆದುಕೊಳ್ಳುತ್ತಿದ್ದೇನೆ ಭೀಮನಬೀಡು ಗ್ರಾಮದ ಎಲ್ಲಾ ವಯೋವೃದ್ಧರಿಗೆ ಉಚಿತವಾಗಿ ಕಣ್ಣಿನ ಪರೀಕ್ಷೆ ಮಾಡಿಸುತ್ತಿದ್ದೇನೆ. ಯಾರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಆಗಬೇಕು ಅಂತವರನ್ನು ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ನಾನೇ ಸ್ವಯಂಕೃತವಾಗಿ ಕರೆದುಕೊಂಡು ಹೋಗಿ ಶಸ್ತ್ರಚಿಕಿತ್ಸೆ ಮಾಡಿಸುತ್ತೇನೆ ಎಂದು ಈ ಮೂಲಕ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಿಜಿ ಶಿವಕುಮಾರ್, ಸದಸ್ಯರಾದ ಸೌಮ್ಯ ಮಹೇಶ್, ಸಿದ್ದಶೆಟ್ಟಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾದ ಶಾಂತ ಪ್ಪ, ಗ್ರಾಮಸ್ಥರು ಆಸ್ಪತ್ರೆಯ ಸಿಬ್ಬಂದಿಗಳು ಇನ್ನು ಮುಂತಾದವರು ಹಾಜರಿದ್ದರು

ವರದಿ ಸದಾನ೦ದ ಕಣ್ಣೆಗಾಲ ಗುಂಡ್ಲುಪೇಟೆ

error: