December 22, 2024

Bhavana Tv

Its Your Channel

ಗುಂಡ್ಲುಪೇಟೆ ಪಟ್ಟಣದಲ್ಲಿ ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಆಚರಣೆ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಮಾನವ ಬಂಧುತ್ವ ವೇದಿಕೆ ವತಿಯಿಂದ ಗುಂಡ್ಲುಪೇಟೆ ಪಟ್ಟಣದ ಚಿಜಲ ವಿದ್ಯಾಸಂಸ್ಥೆಯಲ್ಲಿ ನಡೆದ ಬಾಬಾಸಾಹೇಬ್ ಅಂಬೇಡ್ಕರ್ ಅವರ ೬೬ನೇ ಪರಿನಿಬ್ಬಾಣ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಕ್ಯಾಂಡಲ್ ಹಚ್ಚಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

ನಂತರ ಮಾತನಾಡಿದ ಕಾವಲುಪಡೆಯ ಅಧ್ಯಕ್ಷರಾದ ಅಬ್ದುಲ್ ಮಾಲಿಕ್ ಮಾತನಾಡಿ ಬಾಬಾಸಾಹೇಬ್ ಅಂಬೇಡ್ಕರ್‌ರವರ ತತ್ವಸಿದ್ಧಾಂತಗಳನ್ನು ನಾವು ಪಾಲಿಸುವ ಮುಖಾಂತರ ಅವರಿಗೆ ನಮನಗಳನ್ನು ಸಲ್ಲಿಸೋಣ ಮತ್ತು ಇಡೀ ದೇಶಕ್ಕೆ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ ಅವರನ್ನು ಸ್ಮರಿಸೋಣ ಎಂದರು.

ಮಾನವ ಬಂದುತ್ವ ವೇದಿಕೆಯ ಜಿಲ್ಲಾ ಸಂಚಾಲಕರಾದ ಸುಭಾಷ್ ಮಾಡ್ರಹಳ್ಳಿ ಮಾತನಾಡಿ ಬಾಬಾಸಾಹೇಬ್ ಅಂಬೇಡ್ಕರ್‌ರವರು ಈ ದೇಶಕ್ಕೆ ಸುಭದ್ರವಾದ ಸಂವಿಧಾನವನ್ನು ನೀಡಿದ್ದಾರೆ. ಹಾಗಾಗಿ ನಾವು ಇಂದು ಅಂತಹ ಮಹಾನ್ ವ್ಯಕ್ತಿಯನ್ನು ಇಂದು ಅವರ ೬೬ನೇ ಪರಿನಿಬ್ಬಾಣ ದಿನದಂದು ಅವರನ್ನು ಸ್ಮರಿಸೋಣ ಎಂದರು

ಈ ಸಂದರ್ಭದಲ್ಲಿ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕರಾದ ಸುಭಾಷ್ ಮಾಡ್ರಹಳ್ಳಿ, ತಾಲೂಕು ಸಂಚಾಲಕರಾದ ಆರ್ ಸೋಮಣ್ಣ, ಚಿಜಲ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಮಹದೇವ್, ಕಾವಲುಪಡೆಯ ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಮಾಲಿಕ್, ಜಿಲ್ಲಾ ಕಾರ್ಯಧ್ಯಕ್ಷರಾದ ಅಬ್ದುಲ್ ರಶೀದ್, ಮುಬಾರಕ್, ಸಾಧಿಕ್ ಪಾಶ, ಇಲಿಯಾಸ್, ವೆಂಕಟೇಶ್ ಗೌಡ್ರು, ಮತ್ತು ಕರುನಾಡ ಯುವಶಕ್ತಿ ಸಂಘಟನೆಯ ತಾಲೂಕು ಅಧ್ಯಕ್ಷರಾದ ಮುನಿರ್ ಪಾಷಾ, ಅಂಬೇಡ್ಕರ್ ವಿವಿಧೋದ್ದೇಶ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಗೋವಿಂದರಾಜು, ಕನ್ನಡ ಪರ ಹೋರಾಟಗಾರರಾದ ಬ್ರಹ್ಮಾನಂದ, ಡಿಎಸ್ ಎಸ್ ತಾಲೂಕು ಸಂಚಾಲಕರಾದ ನಂಜುAಡಸ್ವಾಮಿ, ರಂಗಸ್ವಾಮಿ, ಕಾಂಗ್ರೆಸ್ ಮುಖಂಡರಾದ ಸಿ.ಸಿ ದೇವರಾಜ್, ಕಬ್ಬಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಗೋಪಾಲ್, ಅಂಬೇಡ್ಕರ್ ಸೇನೆಯ ತಾಲೂಕು ಅಧ್ಯಕ್ಷರಾದ ದೀಪಕ್ ಮತ್ತು ಮಹೇಶ್, ಲೋಕೇಶ್, ಇನ್ನು ಮುಂತಾದವರು ಹಾಜರಿದ್ದರು
ವರದಿ:ಸದಾನಂದ ಕನ್ನೆಗಾಲ ಗುಂಡ್ಲುಪೇಟೆ

error: