December 22, 2024

Bhavana Tv

Its Your Channel

ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರ ಚುನಾವಣೆಯಲ್ಲಿ ಕೈ ಅಭ್ಯರ್ಥಿ ಡಾ. ತಿಮ್ಮಯ್ಯ ಗೆಲುವು

ಚಾಮರಾಜನಗರ: ಮೊದಲ ಪ್ರಾಶಸ್ತ್ಯ ಮತಗಳಲ್ಲೆ ಗೆಲುವು ಸಾಧಿಸಿದ ಡಾಕ್ಟರ್ ತಿಮ್ಮಯ್ಯ ಹಳೆ ಮೈಸೂರು ಪ್ರಾಂತ್ಯದಲ್ಲಿ ಕಾಂಗ್ರೆಸ್ ಪ್ರಾಬಲ್ಯಫಲಿತಾಂಶ ಹೊರಬೀಳುತ್ತಿದ್ದಂತೆ ಗುಂಡ್ಲುಪೇಟೆಯ ಕಾಂಗ್ರೆಸ್ ಕಚೇರಿಯ ಮುಂಭಾಗ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಗುರು ಪ್ರಸಾದ್ ಮಾತನಾಡಿ ನಿರೀಕ್ಷೆಯಂತೆ ಕಾಂಗ್ರೆಸ್ ಅಭ್ಯರ್ಥಿ ಡಾಕ್ಟರ್ ತಿಮ್ಮಯ್ಯ ಮೊದಲ ಪ್ರಾಶಸ್ತ್ಯಮತದಲ್ಲಿ ಜಯ ಗಳಿಸಿದ್ದಾರೆ. ಇದರಿಂದ ಚಾಮರಾಜನಗರ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಇನ್ನಷ್ಟು ಶಕ್ತಿ ಹೆಚ್ಚಲಿದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಕೆ ಎಸ್ ಮಹೇಶ್, ಮಾಜಿ ಕಾಡಾ ಅಧ್ಯಕ್ಷರಾದ ಎಚ್ ಎಸ್ ನಂಜಪ್ಪ, ಮಾಜಿ ಎಪಿಎಂಸಿ ಅಧ್ಯಕ್ಷರಾದ ಶಿವ ಮಾದಪ್ಪ, ನರಸಿಂಹ ,ಭೀಮನಬೀಡು ಮಂಜು, ನವೀನ್ ಮಾಡ್ರಳ್ಳಿ ಹಾಗೂ ಕಾರ್ಯಕರ್ತರು ಹಾಜರಿದ್ದರು.

ವರದಿ: ಸದಾನಂದ ಕನ್ನೇಗಾಲ ಗುಂಡ್ಲುಪೇಟೆ

error: