December 19, 2024

Bhavana Tv

Its Your Channel

ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮೇಕೆದಾಟು ಪಾದಯಾತ್ರೆ, ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜನಜಾಗೃತಿ ಅಭಿಯಾನ

ಗುಂಡ್ಲುಪೇಟೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಎಚ್ ಎ೦ ಗಣೇಶ್ ಪ್ರಸಾದ್ ರವರು ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ನೀತಿ , ರೈತ ವಿರೋಧಿ ನೀತಿ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜನಜಾಗೃತಿ ಅಬಿಯಾನವನ್ನು ಹಮ್ಮಿಕೊಂಡಿದ್ದು . ಈ ಅಭಿಯಾನಕ್ಕೆ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ , ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್ ದ್ರುವನಾರಾಯಣ್ ,ಜಿಲ್ಲೆಯ ಶಾಸಕರಾದ ಪುಟ್ಟರಂಗಶೆಟ್ಟಿ, ನರೇಂದ್ರ, ವಿಧಾನಪರಿಷತ್ ಸದಸ್ಯರಾದ ಡಾಕ್ಟರ್ ತಿಮ್ಮಯ್ಯ ಸೇರಿದಂತೆ ರಾಜ್ಯ ಮಟ್ಟದ ನಾಯಕರುಗಳು ಪಾಲ್ಗೊಳ್ಳುವರು.
ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ಆಗಮಿಸಬೇಕೆಂದು ಈ ಮೂಲಕ ಕೋರುತ್ತೇನೆ. ಅಲ್ಲದೆ ಚಾಮರಾಜನಗರಕ್ಕೆ ಆಗಮಿಸಲು ಗುಂಡ್ಲುಪೇಟೆ ತಾಲೂಕಿನ ಗ್ರಾಮೀಣ ಪ್ರದೇಶದ ಕಾಂಗ್ರೆಸ್ ಕಾರ್ಯಕರ್ತರಿಗೆ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಎಚ್ ಎ೦ ಗಣೇಶ್ ಪ್ರಸಾದ್, ಎಚ್ ಎಸ್ ನಂಜಪ್ಪ , ಮುನಿರಾಜು ,ಕಬ್ಬಳ್ಳಿ ಮಹೇಶ್,ಎಲ್ ಸುರೇಶ್, ನಾಗರಾಜು ರಂಗೂಪುರ ,ಬಿಜಿ ಶಿವಕುಮಾರ್ ಇನ್ನು ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಸದಾನಂದ ಕನ್ನೆಗಾಲ ಗುಂಡ್ಲುಪೇಟೆ

error: