December 22, 2024

Bhavana Tv

Its Your Channel

ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ ತಾಲೂಕು ಘಟಕದ ವತಿಯಿಂದ ಕೆಎಸ್‌ಆರ್‌ಟಿಸಿ ಬಸ್ ಡಿಪೋ ವ್ಯವಸ್ಥಾಪಕರಿಗೆ ಮನವಿ

ಗುಂಡ್ಲುಪೇಟೆ :- ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಕೆಲವು ಪುಂಡರು ಕಿರುಕುಳ ನೀಡುತ್ತಿದ್ದುದನ್ನು ಗಮನಿಸಿ ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷರಾದ ರಂಗಪ್ಪ ನಾಯಕ ರವರ ನೇತೃತ್ವದಲ್ಲಿ ಡಿಪೋ ವ್ಯವಸ್ಥಾಪಕರಿಗೆ ಘಟನೆಯ ಬಗ್ಗೆ ಮಾಹಿತಿ ನೀಡುವ ಮೂಲಕ ಪುಂಡರ ಹಾವಳಿಯನ್ನು ತಡೆಗಟ್ಟಲು ಮನವಿ ಸಲ್ಲಿಸಿದರು

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಅಧ್ಯಕ್ಷರಾದ ರಂಗಪ್ಪ ನಾಯಕ ಮಾತನಾಡಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಪುಂಡರು ನೀಡುತ್ತಿರುವ ಕಿರುಕುಳವನ್ನು ಕೂಡಲೇ ಪೊಲೀಸ್ ಇಲಾಖೆ ಸಹಕಾರದೊಂದಿಗೆ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ರಂಗಪ್ಪನಾಯಕ, ಉಪಾಧ್ಯಕ್ಷರಾದ ಗಿರೀಶ್, ತಾಲೂಕು ಕಾರ್ಯಾಧ್ಯಕ್ಷರಾದ ಚಿನ್ನಸ್ವಾಮಿ,ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷರಾದ ಗಜ ಮಲ್ಲು ,ಭೀಮನಬೀಡು ಗ್ರಾಮ ಘಟಕದ ಅಧ್ಯಕ್ಷರಾದ ಕೃಷ್ಣ, ತಾಲೂಕು ಪ್ರಧಾನ ಕಾರ್ಯದರ್ಶಿಯಾದ ನವೀನ್, ಹಂಗಳ ಹೋಬಳಿ ರೈತ ಘಟಕದ ಅಧ್ಯಕ್ಷರಾದ ಮಹೇಶ್, ತಾಲೂಕು ಕಾರ್ಯದರ್ಶಿ ರಾಜು, ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು

ವರದಿ: ಸದಾನಂದ ಕನ್ನೇಗಾಲ ಗುಂಡ್ಲುಪೇಟೆ

error: