May 4, 2024

Bhavana Tv

Its Your Channel

ಗುಂಡ್ಲುಪೇಟೆ ; ಸಾರ್ವಜನಿಕರ ಕುಂದುಕೊರತೆ ಸಭಾ ಕಾರ್ಯಕ್ರಮದಲ್ಲಿ ಪ್ರಶ್ನೆಗಳ ಸುರಿಮಳೆ

ಗುಂಡ್ಲುಪೇಟೆ ತಾಲೂಕಿನ ಕೆಲಸೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಸಾರ್ವಜನಿಕರ ಕುಂದುಕೊರತೆ ಸಭಾಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ ಸಿಎಸ್ ನಿರಂಜನ್ ಕುಮಾರ್ ರವರು ಗಿಡಕ್ಕೆ ನೀರನ್ನು ಹಾಕುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಲು ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮೂಲಭೂತ ಹಕ್ಕುಗಳಲ್ಲಿ ಒಂದಾದ ಕುಡಿಯುವ ನೀರಿನ ವಿಚಾರಕ್ಕೆ ಸಂಬAಧಿಸಿದAತೆ ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿಯಲ್ಲಿ ಪ್ರತಿ ಮನೆಗೆ ನೀರು ತಲುಪಬೇಕು ಎಂಬ ಯೋಜನೆ ಜಾರಿಯಾಗಿದ್ದು ಅದು ಅರ್ಧಕ್ಕೆ ಮೊಟಕುಗೊಂಡಿದೆ .ಈ ಗ್ರಾಮದಲ್ಲಿ ಜನಸಂಖ್ಯೆ ಜಾಸ್ತಿ ಇದ್ದು.1 ಲಕ್ಷಲೀಟರ್ ನೀರಿನ ಟ್ಯಾಂಕನ್ನು ನಿರ್ಮಾಣ ಮಾಡಲು ಹಣ ಬಿಡುಗಡೆಯಾಗಿದ್ದರೂ ಸಹ ಇಂಜಿನಿಯರ್ ಅವರು25 ಸಾವಿರ ಲೀಟರ್ ನೀರಿನ ಟ್ಯಾಂಕರ್ ಅನ್ನು ನಿರ್ಮಾಣ ಮಾಡುತ್ತಿದ್ದಾರೆ ಇದು ಎಷ್ಟರಮಟ್ಟಿಗೆ ಸರಿ ಎಂದು ಸಾರ್ವಜನಿಕರು ಇಂಜಿನಿಯ ರ್ ಶಿವಮೂರ್ತಿ ಅವರನ್ನು ತರಾಟೆಗೆ ತೆಗೆದುಕೊಂಡರು

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಸಿಎಸ್ ನಿರಂಜನ್ ಕುಮಾರ್ ರವರು ಸ್ಥಳದಲ್ಲೇ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುವAತೆ ಅಧಿಕಾರಿಗಳಿಗೆ ಸೂಚಿಸಿದರು. ಕೆಲವು ಹಳ್ಳಿಗಳ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯದ ಕೊರತೆಯಿರುವುದರಿಂದ ಅದನ್ನು ತ್ವರಿತವಾಗಿ ಸರಿಪಡಿಸಬೇಕೆಂದು ಈ ಮುಖಾಂತರ ಅಧಿಕಾರಿ ಗಳಿಗೆ ಆದೇಶ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಸಾರ್ವಜನಿಕರು ಹಾಜರಿದ್ದರು

ವರದಿ: ಸದಾನಂದ ಕನ್ನೇಗಾಲ

error: