ಗುಂಡ್ಲುಪೇಟೆ : ತಾಲೂಕಿನ ಮಾಡ್ರಹಳ್ಳಿಯಲ್ಲಿ ನಿವೇಶನ ಹಕ್ಕುಪತ್ರ ವಿತರಣೆ ಮತ್ತು ಕುಡಿಯುವ ನೀರಿನ ಘಟಕವನ್ನು ಕ್ಷೇತ್ರದ ಶಾಸಕರಾದ ಸಿ. ಎಸ್.ನಿರಂಜನ್ ಕುಮಾರ್ ರವರು ಉದ್ಘಾಟನೆ ಮಾಡಿದರು ನಂತರ ಮಾತನಾಡಿದ ಶಾಸಕರು ಸುಮಾರು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ನಿವೇಶನ ಹಕ್ಕು ಪತ್ರವನ್ನು ಇಂದು ನೀಡಲಾಗಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಮನೆ ನಿರ್ಮಾಣಕ್ಕೆ ನೆರವು ನೀಡುತ್ತೇವೆ ಎಂದು ಭರವಸೆ ನೀಡಿದರು.
ನಾಗೇಂದ್ರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಾತನಾಡಿ ಕಳೆದ ೧೨ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಿವೇಶನ ಹಕ್ಕುಪತ್ರವನ್ನು ನಮ್ಮ ನೆಚ್ಚಿನ ಕ್ಷೇತ್ರದ ಜನಪ್ರಿಯ ಶಾಸಕರಾದ ಸಿ ಎಸ್ ನಿರಂಜನ್ ಕುಮಾರ್ ರವರ ನೇತೃತ್ವದಲ್ಲಿ ಹಕ್ಕುಪತ್ರ ಹಂಚುವ ಕಾಲ ಬಂದಿದೆ ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಸಿಎಸ್ ನಿರಂಜನ್ ಕುಮಾರ್, ಮಂಡಲ ಅಧ್ಯಕ್ಷರಾದ ದೊಡ್ಡು೦ಡೀ ಜಗದೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರು ,ಉಪಾಧ್ಯಕ್ಷರು, ಸದಸ್ಯರು, ಪುರಸಭೆ ಅಧ್ಯಕ್ಷರಾದ ಗಿರೀಶ್, ಹಿರಿಯ ಮುಖಂಡ ಶಿವಬಸಪ್ಪ, ಮಾಡ್ರಹಳ್ಳಿ ಯುವ ಮುಖಂಡರಾದ ನಾಗೇಂದ್ರ, ಮಲ್ಲೇಶ ,ಮಳವಳ್ಳಿ ಮಹೇಶ್, ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ವರದಿ : ಸದಾನ೦ದ ಕನ್ನೆಗಾಲ ಗುಂಡ್ಲುಪೇಟೆ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.