ಗುಂಡ್ಲುಪೇಟೆ ತಾಲೂಕಿನ ಮುಕ್ತಿ ಕಾಲೋನಿಯಿಂದ ಬರಗಿ ಗ್ರಾಮಕ್ಕೆ ಬಸ್ ಇಲ್ಲದ ಕಾರಣ ಶಾಲಾ ವಿದ್ಯಾರ್ಥಿಗಳು ದಿನವಿಡೀ ಸುಮಾರು ಎಂಟು ಕಿಲೋಮೀಟರ್ ನಡೆದು ಹೋಗುತ್ತಿದ್ದು. ಇದನ್ನು ಪರಿಗಣಿಸಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಇಲಾಖೆಯ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ಕಾವಲುಪಡೆಯ ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಮಾಲಿಕ್ ಮಾತನಾಡಿ ಬಸ್ ವ್ಯವಸ್ಥೆ ಇಲ್ಲದೆ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗಿದ್ದಕಾರಣ ಕೂಡಲೇ ಬಸ್ ವ್ಯವಸ್ಥೆ ಮಾಡಬೇಕು ಎಂದರು
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಅಮೀರ್, ತಾಲೂಕು ಅಧ್ಯಕ್ಷರಾದ ಅಬ್ದುಲ್ ಮಾಲಿಕ್, ತಾಲೂಕು ಗೌರವಾಧ್ಯಕ್ಷರಾದ ವೆಂಕಟೇಶ್ ಗೌಡ್ರು, ಕಾರ್ಯದರ್ಶಿಗಳಾದ ಮುಬಾರಕ್ ,ಇಲಿಯಾಸ್, ಸಾಧಿಕ್ ಪಾಷಾ ,ಮಿಮಿಕ್ರಿ ರಾಜು ಹೆಚ್.ರಾಜು, ಮಿಟಾಯಿ ಮಂಜು, ಸೇರಿದಂತೆ ಕಾವಲು ಪಡೆ ಯ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು .
ವರದಿ:ಸದಾನಂದ ಕನ್ನೆಗಾಲ ಗುಂಡ್ಲುಪೇಟೆ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.