December 20, 2024

Bhavana Tv

Its Your Channel

ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರಿಂದ ಜಿಲ್ಲಾ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

ಗುಂಡ್ಲುಪೇಟೆ ಕನ್ನಡ ಸಾಹಿತ್ಯ ಪರಿಷತ್ ಗುಂಡ್ಲುಪೇಟೆ ತಾಲೂಕು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಗತ್ ಪ್ರಕಾಶ್ ರವರು ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಒಟ್ಟಿಗೆ ಸೇರಿ ಜಿಲ್ಲಾ ಅಧ್ಯಕ್ಷರಾದ ಎ0. ಶೈಲಾ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲೂಕು ನೂತನ ಅಧ್ಯಕ್ಷರಾದ ಜಗತ್ ಪ್ರಕಾï ರವರು ಎಲ್ಲರಿಗೂ ಅಭಿನಂದನೆಗಳು ತಿಳಿಸಿದರು. ನಂತರ ಕಾವಲುಪಡೆಯ ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಮಾಲಿಕ್ ಮಾತನಾಡಿ ಗುಂಡ್ಲುಪೇಟೆ ಪಟ್ಟಣದಲ್ಲಿ ಕನ್ನಡ ಭವನ ನಿರ್ಮಾಣ ಮಾಡಬೇಕೆಂದು ಜಿಲ್ಲಾ ಅಧ್ಯಕ್ಷರು ಹಾಗೂ ತಾಲೂಕು ಅಧ್ಯಕ್ಷರಿಗೆ ಮನವಿ ಮಾಡಿದರು. ನಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಎಂ ಶೈಲಾ ಕುಮಾರ್ ಮಾತನಾಡಿ ಎಲ್ಲರ ಸಹಕಾರವನ್ನು ತೆಗೆದುಕೊಂಡು ಹಾಗೆ ಹಿರಿಯರ ಸಲಹೆ ಮತ್ತು ಸೂಚನೆಗಳನ್ನು ತೆಗೆದುಕೊಂಡು ಕನ್ನಡ ಸಾಹಿತ್ಯದ ತೇರ ಎಳೆಯಲು ಗುಂಡ್ಲುಪೇಟೆಯಲ್ಲಿ ಹಾಗೂ ಜಿಲ್ಲೆಯಲ್ಲಿ ನಾವು ನೀವು ಎಲ್ಲರೂ ಸಹಕಾರ ಕೊಡಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಎಂ ಶೈಲ ಕುಮಾರ್ ,ತಾಲೂಕು ಅಧ್ಯಕ್ಷರಾದ ಜಗತ್ ಪ್ರಕಾಶ್, ಕರ್ನಾಟಕ ಕಾವಲು ಪಡೆಯ ಅಧ್ಯಕ್ಷರಾದ ಅಬ್ದುಲ್ ಮಾಲಿಕ್, ಕಾರ್ಯದರ್ಶಿಯಾದ ಮುಬಾರಕ್ ,ತಾಲೂಕು ಗೌರವಾಧ್ಯಕ್ಷರಾದ ವೆಂಕಟೇಶ್ ಗೌಡ್ರು ಮಾಜಿ ಪುರಸಭಾ ಸದಸ್ಯರಾದ ಸುರೇಶ್ ಉಮೇಶ್ , ಮಿಟಾಯಿ ಮಹದೇವಪ್ಪ, ಬಡಪನ ಸುರೇಶ್ ಹಾಗೂ ಕನ್ನಡಸಾಹಿತ್ಯಪರಿಷತ್ತಿನ ಹಲವು ಪದಾಧಿಕಾರಿಗಳು ಹಾಜರಿದ್ದರು.

ವರದಿ: ಸದಾನಂದ ಕನ್ನೇಗಾಲ

error: