December 22, 2024

Bhavana Tv

Its Your Channel

ಬದುಕು ಸೇವಾ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ

ಗುಂಡ್ಲುಪೇಟೆ. ತಾಲ್ಲೂಕಿನ ಶೀ0ಡನಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಬದುಕು ಸೇವಾ ಟ್ರಸ್ಟ್ ನವರು ಜೆಎಸ್ ಎಸ್ ಆಸ್ಪತ್ರೆ ಸಹಯೋಗದಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮವನ್ನು ಬದುಕು ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ನಟರಾಜು ರವರು ಗ್ರಾಮಸ್ಥರೊಟ್ಟಿಗೆ ಸೇರಿ ದೀಪ ಬೆಳಗುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ರೋಗ-ರುಜಿನಗಳು ಇರಲಿಲ್ಲ ಇವಾಗ ಬಿಪಿ ಶುಗರ್ ಈ ರೀತಿಯ ಇನ್ನೂ ಅನೇಕ ಸಣ್ಣಪುಟ್ಟ ಕಾಯಿಲೆಗಳು ಬಂದು ದೊಡ್ಡದಾಗುತ್ತದೆ . ಹಾಗಾಗಿ ಸಮಾಜಕ್ಕೆ ನಮ್ಮಿಂದ ಏನಾದರೂ ಕೊಡುಗೆಯನ್ನು ನೀಡಬೇಕೆಂದು ಈ ಬದುಕು ಸೇವಾ ಟ್ರಸ್ಟ್ ನ ಮುಖಾಂತರ ಗ್ರಾಮದ ಜನರನ್ನು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಬೇಕೆಂದು ಕೇಳಿಕೊಂಡಾಗ ಅವರು ಒಮ್ಮತದಿಂದ ಒಪ್ಪಿಗೆ ನೀಡಿದರು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬದುಕು ಸೇವಾ ಟ್ರಸ್ಟ್ ಅಧ್ಯಕ್ಷರಾದ ನಟರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಎಸ್ ಟಿ ಮಹದೇವಸ್ವಾಮಿ, ನೀಲಮ್ಮ, ಹಾಗೂ ಶಾಲೆಯ ಮುಖ್ಯಶಿಕ್ಷಕ ಮುಕ್ತರ್ ಪಾಷಾ, ವೈದ್ಯಾಧಿಕಾರಿಗಳಾದ ಡಾಕ್ಟರ್ ಮೋನಿಕಾ , ಡಾ. ಅಲೋಕ್ , ಚಿರಾಗ್, ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮಲ್ಲಪ್ಪ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರಾಜಪ್ಪ,ಬದುಕು ಸೇವಾ ಟ್ರಸ್ಟ್ ನ ಕಾರ್ಯದರ್ಶಿಗಳಾದ ಸಂತೋಷ್ ಶೆಟ್ಟ್ರಹುಂಡಿ, ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು ಭಾಗಿಯಾಗಿದ್ದರು.

ವರದಿ: ಸದಾನಂದ ಕನ್ನೇಗಾಲ

error: