ಗುಂಡ್ಲುಪೇಟೆ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯನ್ನು ಮಾಡಿ ನಂತರ ಪಟ್ಟಣದ ವಿಜಯ ನಾರಾಯಣ ಸ್ವಾಮಿ ದೇವಾಲಯದಲ್ಲಿ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಾಗೂ ಚಾಮುಲ್ ನಿರ್ದೇಶಕರ ಚುನಾಯಿತ ಪ್ರತಿನಿಧಿಗಳಿಗೆ ಗೆಲುವಿಗೆ ವಿಜಯನಾರಾಯಣಸ್ವಾಮಿಗೆ ಪೂಜೆ ಸಲ್ಲಿಸಿದರು.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಜಿ ಮಧು ಮಾದೇಗೌಡರ ಪರ ಗುಂಡ್ಲುಪೇಟೆ ಪಟ್ಟಣದಲ್ಲಿ ಮತಯಾಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಎಚ್ ಎಮ್ ಗಣೇಶ್ ಪ್ರಸಾದ್ ,ಮಾಜಿ ಕಾಡಾ ಅಧ್ಯಕ್ಷರಾದ ಹೆಚ್ ಎಸ್ ನಂಜಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಕಬ್ಬಳ್ಳಿ ಮಹೇಶ್, ಪುರಸಭಾ ಮಾಜಿ ಸದಸ್ಯರುಗಳಾದ ಚಂದ್ರಪ್ಪ, ಎಲ್ ಸುರೇಶ್ ಹಾಗೂ ಪಟ್ಟಣದ ಮಾಜಿ ಮತ್ತು ಹಾಲಿ ಪುರಸಭಾ ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ದಕ್ಷಿಣ ಪದವೀಧರರು ಇನ್ನು ಮುಂತಾದವರು ಉಪಸ್ಥಿತರಿದ್ದರು.
ವರದಿ: ಸದಾನಂದ ಕನ್ನೇಗಾಲ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.