ಗುಂಡ್ಲುಪೇಟೆ :- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗೂಡಲೂರು ಮಾರ್ಗವಾಗಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಗುಂಡ್ಲುಪೇಟೆಯಿAದ ಕರ್ನಾಟಕಕ್ಕೆ ಪ್ರವೇಶ ಮಾಡಿತು, ಕರ್ನಾಟಕ ರಾಜ್ಯದ ಗಡಿಭಾಗದ ಬಂಡೀಪುರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರದಂತೆ ಇತರರು ರಾಹುಲ್ ಗಾಂಧಿಯವರನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು. ನ0ತರ ವೇದಿಕೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾರತ ಐಕ್ಯತೆಯಾತ್ರೆಗೆ ಸಾಹಿತಿಗಳು ಚಿಂತಕರು ರೈತ ಸಂಘಟನೆಗಳು ಹಲವಾರು ಸಂಘಟನೆಗಳು ಬೆಂಬಲ ನೀಡಿದ್ದಾರೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದ ಜನರ ಆಶೋತರಗಳನ್ನು ಅರ್ಥೈಸಿಕೊಳ್ಳುವಲ್ಲಿ ವಿಫಲವಾಗಿದೆ. ಕೋಮುಗಲಭೆಗಳನ್ನು ಸೃಷ್ಟಿ ಮಾಡುವುದು ಅವರ ವೃತ್ತಿಯಾಗಿದೆ ಮತ್ತು ಈ ಯಾತ್ರೆಯನ್ನು ಹತ್ತಿಕ್ಕಲು ಕಾಂಗ್ರೆಸ್ ಪಕ್ಷದ ನಾಯಕರ ಭಾವಚಿತ್ರಗಳನ್ನು ಹರಿದು ಹಾಕುವ ಕೆಲಸವನ್ನು ಮಾಡುತ್ತಿದ್ದಾರೆ. ಇದು ಖಂಡನೀಯ ಎಂದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ಎಚ್ಚರಿಕೆಯನ್ನೂ ನೀಡಿದ್ದಾರೆ ಮುಂದಿನ ವರ್ಷ ನಮ್ಮ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ನೀವು ನಿಮ್ಮ ಕೆಲಸವನ್ನು ಮಾಡಿ ರಾಜಕೀಯ ಮಾಡಬೇಡಿ ಎಂದರು.
ವರದಿ: ಸದಾನ0ದ ಕನ್ನೆಗಾಲ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.