April 26, 2024

Bhavana Tv

Its Your Channel

ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರ

ಗುಂಡ್ಲುಪೇಟೆ ಪಟ್ಟಣದ ಗುರುಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ಶಿಬಿರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಗುಂಡ್ಲುಪೇಟೆ ತಾಲೂಕು ವತಿಯಿಂದ ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ ಹಾಗೂ ಅಲಿಂಕೋ ಸಂಸ್ಥೆಯ ವೈದ್ಯಾಧಿಕಾರಿಗಳು ಗಿಡಕ್ಕೆ ನೀರು ಹಾಕುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿರವರು ಮಾತನಾಡಿ ಶಿಕ್ಷಣ ಇಲಾಖೆ ಮತ್ತು ಅಲಿ0ಕೊ ಸಂಸ್ಥೆ ಇವರು ವಿಶೇಷವಾಗಿ ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರವನ್ನು ಹಮ್ಮಿ ಕೊಳ್ಳಲಾಗಿದೆ. ಅಲ್ಲದೆ ಕಳೆದ ತಿಂಗಳು ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ 123 ಮಕ್ಕಳಿಗೆ ಉಚಿತವಾಗಿ ಕನ್ನಡಕವು ಬಂದಿದ್ದು. ಅದರಲ್ಲಿ ಗುಂಡ್ಲುಪೇಟೆ ಪಟ್ಟಣದ 14 ಮಕ್ಕಳಿಗೆ ಈ ದಿನ ನೀಡಿದ್ದೇವೆ. ಇನ್ನು ಉಳಿದ ಮಕ್ಕಳಿಗೆ ಆಯಾಯ ಶಾಲೆಯ ಮುಖ್ಯಾಧ್ಯಾಪಕರ ಹತ್ತಿರ ಆಯಾಯ ತರಗತಿಯಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದರು. ಅಲ್ಲದೆ ನಮ್ಮ ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಮತ್ತು ಪೋಷಕರು ಬಂದಿದ್ದೀರಾ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮೂಳೆ ತಪಾಸಣಾ ಶಿಬಿರ ಕಣ್ಣಿನ ತಪಾಸಣಾ ಶಿಬಿರ ಮತ್ತು ಕಿವಿ ಮೂಗು ಮತ್ತು ಗಂಟಲು ತಪಾಸಣಾ ಶಿಬಿರವನ್ನು ವೈದ್ಯಾಧಿಕಾರಿಗಳು ನಡೆಸಿದರು

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ, ಲಕ್ಷ್ಮಿಪತಿ, ವೇದಾವತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಿವಪ್ರಸಾದ್, ಜಿಲ್ಲಾ ಗೌರವಾಧ್ಯಕ್ಷರಾದ ಉಪಾಧ್ಯಕ್ಷರಾದ ಅನ್ನಪೂರ್ಣಮ್ಮ ಮಹೇಶ್, ಅಂಕಪ್ಪ, ಡಾಕ್ಟರ್ ದ್ರಾಕ್ಷಾಯಿಣಿ ಡಾ. ಯೋಗೇಶ್ ,ಉಮೇಶ್, ಸುಧಾ, ಅಲಿ0ಕೊ ಸಂಸ್ಥೆಯ ವೈದ್ಯಾಧಿಕಾರಿಗಳು ಹಾಗೂ ಪೋಷಕರು ಮಕ್ಕಳು ಉಪಸ್ಥಿತರಿದ್ದರು.

ವರದಿ:ಸದಾನಂದ ಕನ್ನೇಗಾಲ

error: