
ಗುಂಡ್ಲುಪೇಟೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಸಕರಾದ ಸಿ ಎಸ್ ನಿರಂಜನ್ ಕುಮಾರ್ ಅವರು ಅಭಿವೃದ್ಧಿ ಕಾರ್ಯಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಕಬ್ಬಹಳ್ಳಿ ಗ್ರಾಮದ ಪರಿಶಿಷ್ಟ ಪಂಗಡದ ಬೀದಿಯಲ್ಲಿ 25 ಲಕ್ಷ .ರೂ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ ಗಳಿಗೆ ಹಾಗೂ ಯಡವನಹಳ್ಳಿ ಗ್ರಾಮದಲ್ಲಿ ಸುಮಾರು 30 ಲಕ್ಷ ದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಹಾಗೂ ಗ್ರಾಮ ದೇವತೆ ಹರಿಹರೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಭೂಮಿ ಪೂಜೆ ಮಾಡಿದರು. ಅಲ್ಲದೆ 25 ಲಕ್ಷ ರೂ ವೆಚ್ಚದಲ್ಲಿ ಕಲ್ಲಿಗೌಡನಹಳ್ಳಿ ಗ್ರಾಮದ ಪರಿಶಿಷ್ಟ ಪಂಗಡದ ಬೀದಿಗೆ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಮತ್ತು ಮೇಲುಕಾಮ್ಮನಹಳ್ಳಿ ಪರಿಶಿಷ್ಟ ಜಾತಿಯ ಬೀದಿಗೆ 20 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಹಂಗಳ ಮಹಾ ಶಕ್ತಿ ಕೇಂದ್ರದಅಧ್ಯಕ್ಷರಾದ ಬಸವೇಶ್, ಯುವ ಮೋರ್ಚಾ ಅಧ್ಯಕ್ಷ ಎಚ್ ಎಮ್ ಪ್ರಣಯ್,ಯುವ ಮುಖಂಡ ಸುರೇಶ್ , ಪಕ್ಷದ ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು
ವರದಿ: ಸದಾನಂದ ಕನ್ನೆಗಾಲ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.