October 3, 2024

Bhavana Tv

Its Your Channel

ಗುಂಡ್ಲುಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಭವನದ ಭೂಮಿ ಪೂಜೆ

ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ವೀರನಪುರ ಕ್ರಾಸ್ ಬಳಿ ಕೈಗಾರಿಕಾ ವಸತಿ ಪ್ರದೇಶ ಪಕ್ಕದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಭವನದ ಭೂಮಿ ಪೂಜೆಯ ಉದ್ಘಾಟನೆಯನ್ನು ಶಾಸಕರಾದ ಸಿ ಎಸ್ ನಿರಂಜನ್ ಕುಮಾರ್ ಮತ್ತು ಯುವ ಮುಖಂಡರಾದ ಹೆಚ್ ಎಂ ಗಣೇಶ್ ಪ್ರಸಾದ್ ರವರು ದೀಪ ಬೆಳಗುವುದರ ಮುಖಾಂತರ ಉದ್ಘಾಟನೆಯನ್ನು ನೆರವೇರಿಸಿದರು.

ನಂತರ ಮಾತನಾಡಿದ ಶಾಸಕರು ಸಮಾಜದ ಅಂಕುಡೊAಕುಗಳನ್ನು ತಿದ್ದುವ ಮತ್ತು ಮಾರ್ಗದರ್ಶನವನ್ನು ಸರಿಯಾದ ರೀತಿಯಲ್ಲಿ ನೀಡುವುದರಲ್ಲಿ ಪತ್ರಕರ್ತರ ಪಾತ್ರ ಬಹಳ ಮುಖ್ಯವಾದದ್ದು ಮತ್ತು ಅವರ ನಿಸ್ವಾರ್ಥ ಸೇವೆ ಸಮಾಜಕ್ಕೆ ಕೊಡುಗೆಯಾಗಿದೆ ಎಂದರು.

ನಂತರ ಯುವ ಮುಖಂಡರಾದ ಎಚ್ ಎಮ್ ಗಣೇಶ್ ಪ್ರಸಾದ್ ಮಾತನಾಡಿ ಸಮಾಜದಲ್ಲಿ ಪತ್ರಿಕೆ ಮಾಧ್ಯಮ ಮತ್ತು ದೃಶ್ಯ ಮಾಧ್ಯಮದವರು ಸರ್ಕಾರದ ವಿಚಾರಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ ಅವರ ಸೇವೆ ಅನನ್ಯ ಮತ್ತು ಅವಿಷ್ಮರಣೀಯ ಎಂದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಪಿ ಗಿರೀಶ್, ಉಪಾಧ್ಯಕ್ಷರಾದ ದೀಪಿಕಾ ಅಶ್ವಿನ್, ಉಪ್ಪಾರ ಮುಖಂಡರಾದ ರಾಮಚಂದ್ರ, ಉಪಾಧ್ಯಕ್ಷರು ಮತ್ತು ಚಾಮುಲ್ ನಿರ್ದೇಶಕರಾದ ಎಂಪಿ ಸುನಿಲ್, ಮಾಜಿ ಕಾಡ ಅಧ್ಯಕ್ಷರಾದ ಎಚ್ ಎಸ್ ನಂಜಪ್ಪ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕಪ್ಪಸೋಗೆ ದೇವರಾಜು,ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಂಗಪುರ ಶಿವಕುಮಾರ್, ನೆನೇ ಕಟ್ಟೆ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಸ್ಥಿತರಿದ್ದರು.

ವರದಿ: ಸದಾನಂದ ಕನ್ನೆಗಾಲ

error: