ಗು0ಡ್ಲುಪೇಟೆ; ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣಾಸಭೆಯಲ್ಲಿ ಗುಂಡ್ಲುಪೇಟೆ ಸಾರ್ವತ್ರಿಕ ವಿಧಾನಸಭಾ ಕ್ಷೇತ್ರಕ್ಕೆ ಸಂಬ0ಧಪಟ್ಟ0ತೆ ಮುಕ್ತ ಮತ್ತು ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನೀತಿ ಸಂಹಿತೆ ಯನ್ನು ನಡೆಸಬೇಕು. ಇದಕ್ಕೆ ಪೂರಕವಾಗಿ ಮಾದರಿ ನೀತಿ ಸಮಿತಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕರಾದ ಅಭಿನವಚಂದ್ರ ರವರು ತಿಳಿಸಿದರು.
ಪ್ರಜಾಪ್ರಭುತ್ವದ ಪ್ರಮುಖ ಪ್ರಕ್ರಿಯೆ ಯಾದ ಚುನಾವಣೆಯನ್ನು ಪಾರದರ್ಶಕವಾಗಿ ಹಾಗೂ ನ್ಯಾಯ ಸಮ್ಮತವಾಗಿ ನಡೆಸಬೇಕು ಈ ನಿಟ್ಟಿನಲ್ಲಿ ಹಲವಾರು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಿನ ಪಾಲನೆಗೆ ಎಲ್ಲರೂ ಪೂರಕವಾಗಿ ನಡೆದುಕೊಳ್ಳಬೇಕು ಎಂದರು. ಯಾವುದೇ ಚುನಾವಣೆ ಅಕ್ರಮಗಳಿಗೆ ಅವಕಾಶವಾಗದಂತೆ ಕಟ್ಟಾಚಾರ ವಹಿಸಲಾಗುತ್ತದೆ ಚುನಾವಣಾ ಅಕ್ರಮಕ್ಕೆ ಕಾರಣವಾಗುವಂತಹ ಏನೇ ಕಂಡು ಬಂದರು ನಿರ್ದಾಕ್ಷಣವಾಗಿ ಕ್ರಮ ಜರುಗಿಸಲಾಗುತ್ತದೆ ಎಂದು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವೆಚ್ಚ ವೀಕ್ಷಕರದ ಹಿಮಾಮಟ್ ಪಿ. ಜೋಶಿ ರವರು ತಿಳಿಸಿದರು ಈ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಅವರ ಪ್ರತಿನಿಧಿಗಳು ಸಭೆಯಲ್ಲಿ ಚುನಾವಣಾ ಅಧಿಕಾರಿಗಳು ಉಪಸ್ಥಿತರಿದ್ದರು
ವರದಿ ; ಸದಾನಂದ ಕನ್ನೆಗಾಲ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ