
ಗುಂಡ್ಲಪೇಟೆ ; ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ರವರು ಬುಧವಾರ ಉಮೇದುವಾರಿಕೆಯನ್ನು ಸಲ್ಲಿಸಿದರು .




ತೆರೆದ ವಾಹನದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಡಾ .ಜಿ. ಪರಮೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವರಾದ ಸತೀಶ್ ಜಾರಕಿಹೊಳಿ ಹೆಚ್ .ಸಿ. ಮಹದೇವಪ್ಪ, ಮಾಜಿ ಶಾಸಕ ನಂಜುAಡಸ್ವಾಮಿ,ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಶಾಸಕರುಗಳಾದ ಎ .ಆರ್. ಕೃಷ್ಣಮೂರ್ತಿ ,ಎಚ ಎಂ ಗಣೇಶ್ ಪ್ರಸಾದ್, ಪುಟ್ಟರಂಗಶೆಟ್ಟಿ , ದರ್ಶನ್ ಧ್ರುವನಾರಾಯಣ್ ,ಜಿಲ್ಲಾಧ್ಯಕ್ಷ ಮರಿಸ್ವಾಮಿ ,ಎಚ್ ಎಸ್ ನಂಜಪ್ಪ ,ಸೇರಿದಂತೆ ಇನ್ನೂ ಅನೇಕ ಮುಖಂಡರುಗಳು ರೋಡ್ ಶೋ ಮಾಡುವುದರ ಮೂಲಕ ತಮ್ಮ ಅಭ್ಯರ್ಥಿಯನ್ನು ಶತಾಯಗತಾಯ ಗೆಲ್ಲಿಸಲೇಬೇಕೆಂದು ಪಣತೊಟ್ಟು ಅಕಾಡಕ್ಕೆ ಇಳಿದು ಬೃಹತ್ ಮೆರವಣಿಯಲ್ಲಿ ಪಾಲ್ಗೊಂಡಿದ್ದರು ,ನಂತರ ಜಿಲ್ಲಾಧಿಕಾರಿ ಯವರ ಕಚೇರಿಗೆ ತೆರಳಿ ಅಭ್ಯರ್ಥಿ ತಮ್ಮ ಪಕ್ಷದ ಹಿರಿಯರೊಂದಿಗೆ ಜೊತೆಗೂಡಿ ಉಮೆದುವಾರಿಕೆ ಸಲ್ಲಿಸಿದರು .
ಮೆರವಣಿಗೆಯಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ,ಪುರುಷರು, ಕಾರ್ಯಕರ್ತರುಗಳು, ಮುಖಂಡರುಗಳು ಇದ್ದರು.
ವರದಿ : ಸದಾನಂದ ಕನ್ನೆಗಾಲ ಗುಂಡ್ಲಪೇಟೆ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.