
ಗುಂಡ್ಲುಪೇಟೆ ; ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಯ ಬಗ್ಗೆ ಒಂದು ದಿನದ ತರಬೇತಿ ಯನ್ನೂ ಶನಿವಾರ ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳಾದ ರಮೇಶ್ ಬಾಬು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ಅಧ್ಯಕ್ಷತೆಯನ್ನು ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಅಲಿಂ ಪಾಷರವರು ವಹಿಸಿದರು, ಗುಂಡ್ಲುಪೇಟೆ ತಾಲೂಕಿನಲ್ಲಿ ಬಾಲ್ಯ ವಿವಾಹವನ್ನು ತಡೆಗಟ್ಟಲು ನಮ್ಮ ಇಲಾಖೆಯಿಂದ ಎಲ್ಲರೂ ಸಹಕಾರ ನೀಡಬೇಕು ಹಾಗೂ ತಮ್ಮ ಗ್ರಾಮಗಳಲ್ಲಿ ಅಥವಾ ನಗರ ಪ್ರದೇಶಗಳಲ್ಲಿ ಬಾಲ್ಯ ವಿವಾಹ ನಡೆಯುತ್ತಿದ್ದರೆ ಉಚಿತ ದೂರವಾಣಿ ಸಂಖ್ಯೆ 1098 ಕರೆ ಮಾಡಿ ಮಾಹಿತಿ ತಿಳಿಸಬೇಕು, ಕರೆ ಮಾಡಿದವರ ಹೆಸರು ವಿಳಾಸ ಗೌಪ್ಯವಾಗಿರುತ್ತದೆ ಇದರಿಂದ ಬಾಲ್ಯ ವಿವಾಹವನ್ನು ತಡೆಗಟ್ಟಲು ಸಹಾಯವಾಗುತ್ತದೆ ಎಂದು ತಿಳಿಸಿರುತ್ತಾರೆ.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಡಾಕ್ಟರ್ ರಾಘವೇಂದ್ರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರಾದ ಶ್ರೀಮತಿ ಪ್ರತಿಮಾ ಪ್ರಾಜೆಕ್ಟ್ ಮ್ಯಾನೇಜರ್ ಖಐಊP . ರವರು ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳು ಸಮುದಾಯ ಆರೋಗ್ಯ ಅಧಿಕಾರಿಗಳು ಆರೋಗ್ಯ ನಿರೀಕ್ಷಣಾಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು
ವರದಿ ; ಸದಾನಂದ ಕಣ್ಣೆಗಾಲ ಗುಂಡ್ಲುಪೇಟೆ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ