May 20, 2024

Bhavana Tv

Its Your Channel

ಶೇಂಗಾ ಬಿತ್ತನೆ ಬೀಜ ವಿತರಣೆ

ಬಾಗೇಪಲ್ಲಿ:- ಮುಂಗಾರು ಹಂಗಾಮಿಗೆ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳು ಪೂರೈಕೆಯಾಗಿದೆ. ಅಗತ್ಯ ದಾಖಲೆಗಳನ್ನು ಸಲ್ಲಿಸಿ ರೈತರು ಬಿತ್ತನೆ ಬೀಜ ಪಡೆಯಬಹುದು ಎಂದು ಬಾಗೇಪಲ್ಲಿ ತಾಲ್ಲೂಕು ಕೃಷಿ ನಿರ್ದೇಶಕ ಕೆ.ಸಿ.ಮಂಜುನಾಥ ತಿಳಿಸಿದರು.

ತಾಲ್ಲೂಕಿನ ಗೂಳೂರು ಹೋಬಳಿ ವ್ಯಾಪ್ತಿಯ ಸದ್ದಪಲ್ಲಿ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ಉಚಿತ ಪ್ರಾತ್ಯಕ್ಷಿಕೆ, ಶೇಂಗಾ ಬಿತ್ತನೆ ಬೀಜ ವಿತರಣೆ ಹಾಗೂ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಕುರಿತು ರೈತರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಬಾಗೇಪಲ್ಲಿ ತಾಲ್ಲೂಕು ಜನಪ್ರಿಯ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಪಾಲ್ಗೊಂಡು ರೈತರಿಗೆ ಕಡಲೆ ಬೀಜ ವಿತರಣೆ ಮಾಡಿದರು.

ಬಾಗೇಪಲ್ಲಿ ತಾಲ್ಲೂಕು ಕೃಷಿ ಇಲಾಖೆ ನಿರ್ದೇಶಕ ಕೆ.ಸಿ.ಮಂಜುನಾಥ ಮಾತನಾಡಿ ಬಾಗೇಪಲ್ಲಿ ಪಟ್ಟಣದ ಕೃಷಿ ಇಲಾಖೆ ಗೋದಾಮಿನಲ್ಲಿ ರಸಗೊಬ್ಬರ ದಾಸ್ತಾನು ಮಾಡಿದ್ದು, ಕೇಂದ್ರ ಸರ್ಕಾರ ಸಬ್ಸಿಡಿ ಮೊತ್ತವನ್ನು ಏರಿಕೆ ಮಾಡಿದೆ. ರಸಗೊಬ್ಬರ ವಿತರಣೆಯಲ್ಲಿ ಯಾವುದೇ ಮೋಸವಾಗದಂತೆ ಮಾರಾಟಗಾರರಿಗೆ ಪಿಒಎಸ್ ಮಿಷನ್‌ಗಳನ್ನು ನೀಡಿದ್ದು, ರೈತರು ಆ ಮಿಷನ್‌ಗಳ ಮೂಲಕ ರಸೀದಿಗಳನ್ನು ಕೇಳಿ ಪಡೆದುಕೊಳ್ಳಬೇಕು. ಸದ್ದಪಲ್ಲಿ ಗ್ರಾಮದಲ್ಲಿ ಶೇಂಗಾ ಬಿತ್ತನೆ ಬೀಜಗಳ ಮಿನಿಕಿಟ್ ನೀಡಿದ್ದು, ಮೊದಲ ಹಂತದಲ್ಲಿ ೨೫ ಬ್ಯಾಗ್ ಎರಡನೇ ಹಂತದಲ್ಲಿ ೭೫ ಬ್ಯಾಗ್ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಣೆ ಮಾಡಲಾಗುವುದು ಎಂದರು.

ಬಾಗೇಪಲ್ಲಿ ತಾಲ್ಲೂಕು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿ ಈ ಯೋಜನೆ ಕುರಿತು ರೈತರಿಗೆ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಬಾಗೇಪಲ್ಲಿ ತಾಲ್ಲೂಕು ತಹಶೀಲ್ದಾರ್ ಡಿ.ಎ.ದಿವಾಕರ್ ತಾ.ಪಂ. ಇ.ಒ ಮಂಜುನಾಥ ಸ್ವಾಮಿ ಬಾಗೇಪಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಸಿ.ಎನ್ .ಸತ್ಯನಾರಾಯಣ ರೆಡ್ಡಿ ,ಜಿಲ್ಲಾ ಪಂಚಾಯತಿ ಸದಸ್ಯ ಲಕ್ಷ್ಮೀ ನರಸಿಂಹಪ್ಪ, ತಾಲ್ಲೂಕು ಅದ್ಯಕ್ಷ ನರೇಂದ್ರ ಬಾಬು,ಕೆ.ಡಿ ಪಿ.ಸದಸ್ಯ ಅಮರನಾಥ ರೆಡ್ಡಿ ಬಾಗೇಪಲ್ಲಿ ತಾಲ್ಲೂಕು ಪೋಲಿಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕ ಗೋಪಾಲ ರೆಡ್ಡಿ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

error: