May 19, 2024

Bhavana Tv

Its Your Channel

ಮಲೇರಿಯಾ ವಿರೋಧಿ ಮಾಸಾಚರಣೆ

ಪಾತಪಾಳ್ಯ:- ಮಲೇರಿಯಾ, ಸೊಳ್ಳೆಯಿಂದ ಮನುಷ್ಯನಿಗೆ ಹರಡುವ ರೋಗ. ಅನಾಫಿಲಿಸ್ ಸೊಳ್ಳೆ ಕಚ್ಚಿದಾಗ ಜ್ವರ ಬರುತ್ತದೆ. ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ ಎಂದು ಪಾತಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಪ್ರಿಯಾಂಕಾ ರವರು ಹೇಳಿದರು.

ಅವರು ಬಾಗೇಪಲ್ಲಿ ತಾಲ್ಲೂಕು ಪಾತಪಾಳ್ಯ ಗ್ರಾಮ ಪ್ರಾಥಮಿಕ ಅರೋಗ್ಯ ಕೇಂದ್ರದ ವತಿಯಿಂದ ಮಲೇರಿಯಾ ವಿರೋಧಿ ಮಾಸಾಚರಣೆ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಒಂದು ಸಲ ಈ ಅನಾಫಿಲಿಸ್ ಸೊಳ್ಳೆಯು ಮನುಷ್ಯರಿಗೆ ಕಚ್ಚಿದ ಬಳಿಕ ಪ್ಲಾಸ್ಮೋಡಿಯಾ ಮನುಷ್ಯನ ಯಕೃತ್‌ನಲ್ಲಿ ತನ್ನ ಸಂತಾನಾಭಿವೃದ್ಧಿ ಮಾಡಿ, ಸೋಂಕು ಉಂಟು ಮಾಡುತ್ತದೆ. ಕೆಂಪು ರಕ್ತದ ಕಣಗಳನ್ನು ನಾಶಪಡಿಸುತ್ತದೆ. ಸಾಮಾನ್ಯವಾಗಿ ಮಲೇರಿಯಾ ಜ್ವರವನ್ನು ಹೊಂದಿದ ವ್ಯಕ್ತಿಗಳು ತೀವ್ರ ಅನಾರೋಗ್ಯದಿಂದ ಬಳಲುತ್ತಿರುತ್ತಾರೆ. ವಿಪರೀತ ಜ್ವರ, ಹಲ್ಲು ಕಚ್ಚಿಕೊಳ್ಳುವಷ್ಟು ಚಳಿ, ಜತೆಗೆ ಮೈಕೈ ನೋವು ಸಾಮಾನ್ಯ ಸಮಸ್ಯೆಗಳಾಗಿ ಕಾಡುತ್ತವೆ. ಮೊದಲೇ ಇವುಗಳ ಬಗ್ಗೆ ಅರಿತು ಚಿಕಿತ್ಸೆ ಪಡೆದರೆ ಸಾವು ಸಂಭವಿಸುವುದನ್ನು ತಪ್ಪಿಸಬಹುದು ಎಂದು ಅವರು ಹೇಳಿದರು.

ಹಿರಿಯ ಸ್ಟಾಪ್ ನರ್ಸ್ ಶಶಿಕಲಾ ಮಾತನಾಡಿ ,ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸಂಜೆ ಸೊಳ್ಳೆಗಳು ಹೆಚ್ಚಾಗಿರುವುದರಿಂದ ರಾತ್ರಿ ವೇಳೆ ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ಮೊದಲೇ ನಾವು ಸೊಳ್ಳೆಗಳ ತಾಣವನ್ನು ನಾಶಮಾಡಿ ಸೊಳ್ಳೆಗಳು ಹೆಚ್ಚಾಗದಂತೆ ನೋಡಿಕೊಳ್ಳಬೇಕು,
೨೦೨೫ ಕ್ಕೆ ನಾವು ಮಲೇರಿಯಾ ಮುಕ್ತ ಭಾರತ ನಿರ್ಮಾಣ ಮಾಡೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಾತಪಾಳ್ಯ ಆರೋಗ್ಯ ಕೇಂದ್ರದ ಶಶಿಕಲಾ, ಪಕೃದ್ದೀನ್, ಆಶಾ ಕಾರ್ಯಕರ್ತರಾದ ಜ್ಯೋತಿ, ಲಕ್ಷ್ಮೀ, ಅನಿತ,ವೀಣಾ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

ವರದಿ:-ರಾ.ನ.ಗೋಪಾಲ ರೆಡ್ಡಿ ಬಾಗೇಪಲ್ಲಿ ತಾಲ್ಲೂಕು

error: