May 6, 2024

Bhavana Tv

Its Your Channel

ನ್ಯಾಯಾಲಯಗಳಲ್ಲಿ ಆಗಸ್ಟ್ ೧೪ ರಂದು ಮೆಗಾ ಲೋಕ ಅದಾಲತ್

ಬಾಗೇಪಲ್ಲಿ:- ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ಪರಸ್ಪರ ಒಪ್ಪಿಗೆಯಿಂದ ಉಭಯ ಪಕ್ಷಗಾರರು ಶೀಘ್ರವಾಗಿ ಇತ್ಯರ್ಥ ಪಡಿಸಿಕೊಳ್ಳಲು ನೆರವಾಗುವ ಮೆಗಾ ಲೋಕ್ ಅದಾಲತ್ ಇದೇ ಆಗಸ್ಟ್ ೧೪ ರಂದು ಎಲ್ಲಾ ತಾಲ್ಲೂಕುಗಳ ನ್ಯಾಯಾಲಯಗಳಲ್ಲಿ ನಡೆಯಲಿದೆ.
ಬಾಗೇಪಲ್ಲಿ ತಾಲ್ಲೂಕು ನ್ಯಾಯಾಧೀಶ ಹಾಗೂ ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ
ಎಸ್. ಎಂ.ಅರುಟಗಿ ಅವರು ಸೋಮವಾರ ಸುದ್ದಿಗೋಷ್ಠಿ ನಡೆಸಿ ಲೋಕ ಅದಾಲತ್ ಬಗ್ಗೆ ಮಾಹಿತಿ ನೀಡಿದರು.

ಬಾಗೇಪಲ್ಲಿ ತಾಲ್ಲೂಕಿನಾದ್ಯಂತ ಪಟ್ಟಣದ ನ್ಯಾಯಾಲಯದಲ್ಲಿ ಬೈಠಕ್‌ಗಳನ್ನು ಏರ್ಪಡಿಸಿ ಸಂಧಾನಕಾರರನ್ನು ನೇಮಿಸಿ, ಲೋಕ ಅದಾಲತ್ ನಡೆಸಲಾಗುತ್ತದೆ. ಇದರಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣಗಳನ್ನು ಬಿಟ್ಟು, ಸಿವಿಲ್ ಪ್ರಕರಣಗಳು, ದಾಂಪತ್ಯ ಜೀವನಕ್ಕೆ ಸಂಬAಧಿಸಿದ ದಾಂಪತ್ಯ ಹಕ್ಕುಗಳ ಪುನರ್ ಸ್ಥಾಪನೆ, ಜೀವನಾಂಶ, ಮಕ್ಕಳ ಸಂರಕ್ಷಣೆಗೆ ಸಂಬAಧಿಸಿದ ಎಲ್ಲ ಪ್ರಕರಣಗಳು, ಮೋಟಾರ್ ವಾಹನ ಅಪಘಾತಕ್ಕೆ ಸಂಬAಧಪಟ್ಟ ಪ್ರಕರಣಗಳು, ಕೈಗಾರಿಕಾ ವಿವಾದ ಕಾಯ್ದೆ ಅಡಿಯಲ್ಲಿರುವ ಪ್ರಕರಣಗಳು ಹಾಗೂ ಇತರೆ ಎಲ್ಲಾ ಸ್ವರೂಪದ ಪ್ರಕರಣಗಳು ಮತ್ತು ದಂಡ ಪ್ರಕ್ರಿಯ ಸಂಹಿತೆ ಕಲಂ ೩೨೦(೧) ಮತ್ತು ೩೨೦(೨)ರ ಅಡಿಯಲ್ಲಿ ರಾಜಿ ಮಾಡಿಕೊಳ್ಳಬಹುದಾದಂತಹ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಸುಬ್ಬಿರೆಡ್ಡಿ,ನಂಜಪ್ಪ,ನoಜುoಡಪ್ಪ, ಮಂಜುಳಾ,ಎನ್.ನಾಗಭೂಷಣ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು

.

error: