April 23, 2024

Bhavana Tv

Its Your Channel

ಸರ್ಕಾರಿ ಬಾಲಕಿಯರ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮಕ್ಕೆ ಬಿಇಓ ಎಸ್. ಸಿದ್ದಪ್ಪ ಚಾಲನೆ

ಬಾಗೇಪಲ್ಲಿ:-ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಭಾಷೆಯ ಅನಿವಾರ್ಯತೆ ಇದ್ದು, ಬಡ ಕುಟುಂಬದ ಪ್ರತಿ ಮಗುವಿಗೂ ಗುಣಾತ್ಮಕ ಶಿಕ್ಷಣ ಒದಗಿಸುವ ಉದ್ದೇಶದಿಂದ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲಾಗಿದೆ ಎಂದು ಬಾಗೇಪಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿದ್ದಪ್ಪ ತಿಳಿಸಿದರು.

ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಬಾಲಕಿಯರ ಹಿರಿಯ ಮಾದರಿ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಒಂದನೇ ತರಗತಿ ಆಂಗ್ಲ ಮಾಧ್ಯಮ ಆರಂಭ ಕಾರ್ಯಕ್ರಮಕ್ಕೆ ವಿದ್ಯಾರ್ಥಿನಿಯನ್ನು ದಾಖಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ಆಂಗ್ಲ ಮಾದ್ಯಮ ಆರಂಭವಾಗುತ್ತಿರುವುದರಿAದ ಪಾಲಕರಲ್ಲಿ ಜಾಗೃತಿ ಉಂಟು ಮಾಡಬೇಕಾಗಿದೆ. ಆಗ ಮಾತ್ರ ನಿರೀಕ್ಷೆಗೂ ಮೀರಿ ದಾಖಲಾತಿ ಆಗುವ ಸಾದ್ಯತೆ ಇದ್ದು, ಶಾಲೆಗಳಲ್ಲಿ ದೊರೆಯುವ ಸೌಲಭ್ಯ ಶಿಕ್ಷಣದ ಗುಣಮಟ್ಟ ಸೇರಿ ವಿಶೇಷತೆಗಳ ಬಗ್ಗೆ ಪೋಷಕರಲ್ಲಿ ಮನೆ ಮನೆ ಭೇಟಿ, ಜಾಥಾ ಮುಖಾಂತರ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕಾಗಿದ್ದು, ಇದಕ್ಕೆ ಎಲ್ಲರ ಸಹಕಾರ ಬೇಕಾಗಿದೆ ಎಂದರು.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ವೆಂಕಟರವಣ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ರೇಡಿಯೋ ತರಗತಿ, ಅನುಭವಿ ಶಿಕ್ಷಕರಿಂದ ಬೋಧನೆ, ಆಕರ್ಷಕ ಶಾಲಾ ವಾತಾವರಣ, ಉಚಿತ ಪಠ್ಯ ಪುಸ್ತಕ ವಿತರಣೆ, ಬೆಳಗಿನ ಕ್ಷೀರ ಭಾಗ್ಯ, ಮಧ್ಯಾಹ್ನ ಬಿಸಿಯೂಟ, ಉಚಿತ ಎರಡು ಜೊತೆ ಸಮವಸ್ತ್ರ ಶೂ, ಸಾಕ್ಸ್, ವಿದ್ಯಾರ್ಥಿ ವೇತನ ಸೇರಿದಂತೆ ಇಂಗ್ಲೀಷ್ ಮಾದ್ಯಮ ಆರಂಭಿಸುತ್ತಿರುವುದು ಸಂತಸದ ವಿಷಯವಾಗಿದ್ದು, ಪೋಷಕರು ಈ ಬಗ್ಗೆ ಚಿಂತನ ಮಂಥನ ನಡೆಸಿ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಸಮನ್ವಯ ಅಧಿಕಾರಿ ವೆಂಕರಾಮ್ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಅನಿವಾರ್ಯ. ಇಂಗ್ಲಿಷ್ ಮೀಡಿಯಂ ಆರಂಭಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಸರಕಾರಿ ಶಾಲೆಗಳಲ್ಲಿ ಕಲಿಯಲು ಬರುವ ಬಡ ಮಕ್ಕಳಿಗೂ ಇಂಗ್ಲಿಷ್ ಮಾಧ್ಯಮದ ಕಲಿಯುವ ಅವಕಾಶ ಸಿಕ್ಕಂತಾಗುತ್ತದೆ. ಆದರೆ, ಸರಕಾರ ಕೇವಲ ೩೦ ಮಕ್ಕಳ ಪ್ರವೇಶಕ್ಕೆ ಅನುಮತಿ ನೀಡಿದ್ದು ಮುಂದೆ ವಿದ್ಯಾರ್ಥಿಗಳು ಅನುಗುಣವಾಗಿ ಹೆಚ್ಚಿನ ಮಕ್ಕಳನ್ನು ದಾಖಲಿಸಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷೆ ಪ್ರಭಾವತಿ, ಪ್ರಧಾನ ಕಾರ್ಯದರ್ಶಿ ಸಿ.ವೆಂಕಟರಾಯಪ್ಪ, ಬಾಗೇಪಲ್ಲಿ ಸಿ.ಆರ್.ಸಿ.ಗಳಾದ ಕೆ.ಬಿ.ಆಂಜನೇಯ ರೆಡ್ಡಿ ,ಸಿ.ಬಾಲರಾಜು,ಮಂಜುನಾಥ, ಕದಿರಪ್ಪ,ಮುಖ್ಯ ಶಿಕ್ಷಕಿ ಧರ್ಮಪುತ್ರಿ,ಶಿಕ್ಷಕ ಜಿ.ಆರ್.ರಮೇಶ್ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು

ವರದಿ ಗೋಪಾಲ ರೆಡ್ಡಿ ಬಾಗೇಪಲ್ಲಿ

error: