May 2, 2024

Bhavana Tv

Its Your Channel

ಕರ್ನಾಟಕ ಕಾರ್ಮಿಕ ಕಲ್ಯಾಣ ಇಲಾಖೆ ವತಿಯಿಂದ ದಿನಸಿ ಕಿಟ್ ವಿತರಣೆ

ಬಾಗೇಪಲ್ಲಿ: – ಕರೊನಾ ಸೋಂಕಿನಿAದ ತೀವ್ರ ಸಂಕಷ್ಟಕ್ಕೆ ಈಡಾಗಿದ್ದ ಕಟ್ಟಡ ಕಾಮಿರ್ಕರು ಹಾಗೂ ಇತರೆ ಕಾರ್ಮಿಕರಿಗೆ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ವತಿಯಿಂದ ಆಹಾರದ ಕಿಟ್‌ಗಳನ್ನು ನೀಡುತ್ತಿದ್ದು, ತಾಲೂಕಿನಲ್ಲಿರುವ ಐದು ಸಾವಿರ ಕಾರ್ಮಿಕರಿಗೆ ನೆರವಾಗಿದೆ ಎಂದು ಬಾಗೇಪಲ್ಲಿ ತಾಲ್ಲೂಕು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹೇಳಿದರು.

ಅವರು ಬಾಗೇಪಲ್ಲಿ ಪಟ್ಟಣದ ಹೊರವಲಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶನಿವಾರ ಕಾರ್ಮಿಕ ಇಲಾಖೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಐದು ಸಾವಿರ ಬಂದಿದ್ದು ಇಂದು ಕಾರ್ಮಿಕರಿಗೆ ಆಹಾರ ಧಾನ್ಯದ ಕಿಟ್ ಸಾಂಕೇತಿಕವಾಗಿ ೧೦ ಕಾರ್ಮಿಕರಿಗೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೋವಿಡ್ ಸೋಂಕು ಹರಡಿದ ಸಂದರ್ಭದಲ್ಲಿ ದೇಶದಲ್ಲಿರುವ ಲಕ್ಷಾಂತರ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದರಿAದ ದೈನಂದಿನ ಬದುಕು ಸಾಗಿಸಲು ತೀವ್ರ ಸಂಕಷ್ಟ ಅನುಭವಿಸಿದ್ದರು. ದುಡಿಯುವ ವರ್ಗಕ್ಕೆ ಕೋವಿಡ್ ಸೋಂಕು ಪೆಟ್ಟು ನೀಡಿದ್ದರಿಂದ ಆರ್ಥಿಕ ಸಂಕಷ್ಟ ಮಿತಿ ಮೀರಿತ್ತು. ಆದ್ದರಿಂದ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯಿಂದ ಆಹಾರದ ಕಿಟ್ ವಿತರಿಸಲಾಗುತ್ತಿದೆ. ಪ್ರತಿಯೊಬ್ಬರು ಕಷ್ಟದಲ್ಲಿರುವ ಕಾರ್ಮಿಕರ ನೆರವಿಗೆ ಧಾವಿಸಬೇಕು ಎಂದು ಹೇಳಿದರು.
ರಾಜ್ಯ ಸರ್ಕಾರದಿಂದ ೫ ಸಾವಿರ ಜನರಿಗೆ ಕಿಟ್ ವಿತರಿಸಲಾಗಿದ್ದು, ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಾಗೇಪಲ್ಲಿ ತಾಲ್ಲೂಕು ತಹಶಿಲ್ದಾರ್ ಡಿ. ಎ.ದಿವಾಕರ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಲಕ್ಷ್ಮೀ ನರಸಿಂಹಪ್ಪ, ಪುರಸಭೆ ಸದಸ್ಯ ಶ್ರೀನಿವಾಸ್ ರೆಡ್ಡಿ, ಜಿಲ್ಲಾ ಕಾರ್ಯ ಇಲಾಖೆ ಅಧಿಕಾರಿ ವರಲಕ್ಷ್ಮೀ, ಬಾಗೇಪಲ್ಲಿ ತಾಲ್ಲೂಕು ಕಾರ್ಮಿಕ ಇಲಾಖೆ ನಿರೀಕ್ಷಿಕಿ ಕಲಾವಾಣಿ, ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜು ಪ್ರಾಂಶುಪಾಲರಾದ ನಾರಾಯಣಪ್ಪ, ಕಾರ್ಮಿಕ ಇಲಾಖೆ ಸಿಬ್ಬಂದಿ ನಾಗೇಶ್ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

ವರದಿ: ಗೋಪಾಲ ರೆಡ್ಡಿ ಬಾಗೆಪಲ್ಲಿ

error: