March 29, 2024

Bhavana Tv

Its Your Channel

ಬಕ್ರೀದ್ ಹಬ್ಬದ ಪ್ರಯುಕ್ತ ನಾಗರಿಕ ಶಾಂತಿ ಸಭೆ; ಹಬ್ಬದ ವೇಳೆ ಶಾಂತಿ ಸೌಹಾರ್ದತೆ ಕಾಪಾಡಿ :ಸರ್ಕಲ್ ಇನ್ಸ್ಪೆಕ್ಟರ್ ನಾಗರಾಜು:

ಬಾಗೇಪಲ್ಲಿ:- ಕೊರೊನಾ ಸಂದರ್ಭ ಇದಾಗಿದ್ದು, ಸರ್ಕಾರದ ಸೂಚನೆಯನ್ನು ಪಾಲನೆ ಮಾಡುವ ಮೂಲಕ ಬಕ್ರೀದ್ ಹಬ್ಬದ ಆಚರಣೆಯ ವೇಳೆಯಲ್ಲಿ ಪ್ರತಿಯೊಬ್ಬರು ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಬಾಗೇಪಲ್ಲಿ ಪಟ್ಟಣದ ಸರ್ಕಲ್ ಇನ್ಸ್ಪೆಕ್ಟರ್ ನಾಗರಾಜು ಮನವಿ ಮಾಡಿದರು.

ಬಕ್ರೀದ್ ಆಚರಣೆ ಹಿನ್ನೆಲೆಯಲ್ಲಿ ಶನಿವಾರ ಬಾಗೇಪಲ್ಲಿ ತಾಲ್ಲೂಕು ಪಟ್ಟಣದ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನಾಗರಿಕ ಶಾಂತಿ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ೨೧ರಂದು ನಡೆಯುವ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಎಲ್ಲಾ ಸಮುದಾಯದವರು ಕೈ ಜೋಡಿಸಬೇಕು ಎಂದು ಹೇಳಿದರು.

ಈದ್ಗಾ ಮೈದಾನಗಳಲ್ಲಿ ಈ ಬಾರಿ ಪ್ರಾರ್ಥನೆ ಮಾಡುವಂತಿಲ್ಲ. ತೆರೆದ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಒಟ್ಟುಗೂಡುವುದನ್ನು ನಿಷೇಧಿಸಲಾಗಿದೆ. ಮಸೀದಿಗಳಲ್ಲಿ ಮಾತ್ರ ಪ್ರಾರ್ಥನೆ ನಿರ್ವಹಿಸಲು ಅವಕಾಶವಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರದ ನಿಯಮಗಳನ್ನು ಪಾಲಿಸಬೇಕಾಗಿದೆ ಎಂದರು. ದರ್ಗಾ ಮಸೀದಿಗಳಲ್ಲಿ ೫೦ ಜನ ಮೀರದಂತೆ ಪ್ರಾರ್ಥನೆ ಮಾಡಬೇಕು. ಮಸೀದಿ ಸಣ್ಣದಿದ್ದರೆ ೨೦ ಜನ ಸಾಕು. ಒಂದೊಮ್ಮೆ ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದರೆ ಸರದಿಯಂತೆ ಪ್ರಾರ್ಥನೆ ಮಾಡಬೇಕು. ಪ್ರಾರ್ಥನೆ ಮುಗಿದ ಮೇಲೆ ಶುಚಿಗೊಳಿಸಿ ಮತ್ತೆ ಪ್ರಾರ್ಥನೆ ಮಾಡಬೇಕು. ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯವಾಗಿದೆ. ೬೦ ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಹಾಗೂ ೧೦ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು. ನಮಾಜ್ ಮಾಡುವವರು ತಮ್ಮ ಮಧ್ಯೆ ಕನಿಷ್ಠ ೬ ಅಡಿ ಅಂತರ ಕಾಯ್ದುಕೊಳ್ಳಬೇಕು. ಮಸೀದಿ ಪ್ರವೇಶಿಸುವ ಮೊದಲು ದೇಹದ ತಾಪಮಾನ ತಪಾಸಣೆ ಮಾಡಬೇಕು. ಕೈಗಳನ್ನು ಸೋಪು ಅಥವಾ ಸ್ಯಾನಿಟೈಸರ್‌ನಿಂದ ಶುಚಿಗೊಳಿಸಿಕೊಳ್ಳಬೇಕು ಎಂದು ನಿಯಮಗಳನ್ನು ತಿಳಿಸಿದರು.

ಬಾಗೇಪಲ್ಲಿ ಪಟ್ಟಣದ ಮುಸ್ಲಿಂ ಮುಖಂಡ ಹಾಗೂ ಪುರಸಭೆ ಮಾಜಿ ಸದಸ್ಯ ಮಹಮ್ಮದ್ ನೂರುಲ್ಲಾ ಮಾತನಾಡಿ ೨೧ ರಂದು ನಡೆಯುವ ಬಕ್ರೀದ್ ಹಬ್ಬವನ್ನು ಸರ್ಕಾರದ ನಿಯಮಗಳನ್ನು ಪಾಲಿಸಿ ಹಬ್ಬವನ್ನು ಆಚರಿಸಲು ನಮ್ಮೆಲ್ಲರ ಸಹಕಾರವಿದೆ ಕರೋನ ಸಂದರ್ಭ ಇದಾಗಿದ್ದು ಕರೋನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಹಿಂದೂ ಮತ್ತು ಮುಸ್ಲಿಂ ಧರ್ಮದ ಶಾಂತಿ ಸೌಹಾರ್ದತೆ ಯನ್ನು ಕಾಪಾಡಿ ಹಬ್ಬವನ್ನು ಸರಳವಾಗಿ ಆಚರಿಸುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಟ್ಟಣದ ವಿವಿಧ ಮಸೀದಿಗಳ ಮುಖಂಡರಾದ ಹುಸೇನ್, ರಫೀಕ್, ಜಮೀರ್,ಆಜಮ್, ಕಲೀಮ್,ರಿಜ್ವಾನ್, ಸಮಿಉಲ್ಲಾ, ಫಕ್ರುದ್ದೀನ್,ಬಾಬಾಜಾನ್,ಮತ್ತು ಜೆಡಿಎಸ್ ನ ತಾಲ್ಲೂಕು ಅಧ್ಯಕ್ಷ ಸೂರ್ಯನಾರಾಯಣ ರೆಡ್ಡಿ, ವೆಂಕಟರೆಡ್ಡಿ,ಬಿಜೆಪಿ ಪಕ್ಷದ ಮುಖಂಡರಾದ ಲೋಕೇಶ್, ರಂಗಾರೆಡ್ಡಿ ನಾಗರಾಜ್ ಹಾಗೂ ಕರ್ನಾಟಕ ಹಸಿರು ಸೇನೆ ಮುಖಂಡರು ಭಾಗವಹಿಸಿದ್ದರು.

error: