April 26, 2024

Bhavana Tv

Its Your Channel

ಬಾಗೇಪಲ್ಲಿ: ಬಕ್ರೀದ್ ಹಬ್ಬ ಸರಳ ಆಚರಣೆ

ಬಾಗೇಪಲ್ಲಿ:– ತ್ಯಾಗ, ಬಲಿದಾನ, ಸೋದರತ್ವದ ಪವಿತ್ರ ಸಂಕೇತ­ವಾದ ಬಕ್ರೀದ್ ಹಬ್ಬವನ್ನು ಬಾಗೇಪಲ್ಲಿ ತಾಲ್ಲೂಕಿನಾದ್ಯಂತ ಬುಧವಾರ ಸರಳವಾಗಿ ಆಚರಿಸಲಾಯಿತು. ಕರೋನ ಭೀತಿ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದವರು ಮನೆಗಳಲ್ಲೇ ಶ್ರದ್ಧಾ ಭಕ್ತಿಯಿಂದ ಹಬ್ಬ ಆಚರಿಸಿದರು.

ಕೊರೊನಾ ಸೋಂಕಿನ ಆತಂಕದ ಕಾರಣಕ್ಕೆ ಮಸೀದಿಗಳಲ್ಲಿ ಒಂದು ಬಾರಿಗೆ ತಲಾ ೫೦ ಮಂದಿಗೆ ಮಾತ್ರ ಪ್ರವೇಶ ನೀಡಿ ಪ್ರತ್ಯೇಕವಾಗಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಯಿತು. ಮಾಸ್ಕ್ ಧರಿಸಿದ್ದ ಮುಸ್ಲಿಂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರದೆ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಿದರು.

ಕೋವಿಡ್ ಕಾರಣಕ್ಕೆ ಇಡೀ ವಿಶ್ವ ಸಂಕಷ್ಟದಲ್ಲಿರುವಾಗ ಸಂಭ್ರಮಪಡಬಾರದು ಎಂದು ಗುರು, ಮೌಲ್ವಿ, ಪ್ರಾರ್ಥನೆ ಮಾಡಿದರು.

ಕೊರೊನಾ ಸೋಂಕಿನ ಸಂಕಷ್ಟ ನಿವಾರಣೆಗಾಗಿ ದೇವರಲ್ಲಿ ಮೊರೆಯಿಟ್ಟರು. ಮಸೀದಿಯೊಳಗೆ ಮುಸ್ಲಿಮರು ದೂರದಿಂದಲೇ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ ಕೆಲವೇ ಮಂದಿ ಮಾತ್ರ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಿದರು.


ವರದಿ ಗೋಪಾಲರೆಡ್ಡಿ ಬಾಗೇಪಲ್ಲಿ

error: