May 5, 2024

Bhavana Tv

Its Your Channel

ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಪ್ರಗತಿ ಸಾಧಿಸಿ: ಶಾಸಕ ಎಸ್. ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:- ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ರೈತರು ಆರ್ಥಿಕವಾಗಿ ಸದೃಢರಾಗಬೇಕು ಎಂದು ಬಾಗೇಪಲ್ಲಿ ತಾಲ್ಲೂಕು ಜನಪ್ರಿಯ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹೇಳಿದರು
ಅವರು ಬಾಗೇಪಲ್ಲಿ ತಾಲ್ಲೂಕು ಮಿಟ್ಟೇಮರಿ ಗ್ರಾಮದಲ್ಲಿ ಸೋಮವಾರ ಕೃಷಿ ಇಲಾಖೆ ಆಯೋಜಿಸಲಾಗಿದ್ದ ಕೃಷಿ ಯಂತ್ರಧಾರೆ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಾಡಿಗೆ ಆಧಾರಿತ
ಸೇವಾ ಕೇಂದ್ರದ ಹಾಗೂ ಬೀಜೋಪಚಾರ ಮತ್ತು ಗೊಬ್ಬರ ಬಳಿಕೆ ತರಬೇತಿ ಕೇಂದ್ರ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಬಾಗೇಪಲ್ಲಿ ತಾಲ್ಲೂಕಿನಾದ್ಯಂತ ನಾನು ಪ್ರವಾಸ ಕೈಗೊಂಡ ಸಂದರ್ಭದಲ್ಲಿ ರೈತರೊಂದಿಗೆ, ಅವರ ಸಮಸ್ಯೆಗಳನ್ನು ಆಲಿಸಿದ್ದೇನೆ. ಈ ಪೈಕಿ ಬಹುತೇಕ ರೈತರ ಸಮಸ್ಯೆ ಎಂದರೆ, ಯುವ ಪೀಳಿಗೆ ಕೃಷಿಯೇತರ ಕಸುಬಿನತ್ತ ಮುಖ ಮಾಡುತ್ತಿರುವುದರಿಂದ, ಕೃಷಿ ಕೂಲಿ ಕಾರ್ಮಿಕರ ಕೊರತೆಯಾಗುತ್ತಿದ್ದು, ಲಭ್ಯವಿರುವ ಕೂಲಿ ಕಾರ್ಮಿಕರ ವೆಚ್ಚ ಅಧಿಕವಾಗುತ್ತಿದ್ದು, ಕೃಷಿ ಚಟುವಟಿಕೆ ನಡೆಸಲು ತೊಂದರೆಯಾಗುತ್ತಿದ್ದು ಆದ್ದರಿಂದ ಅತ್ಯಂತ ಕಡಿಮೆ ದರದಲ್ಲಿ ಎಲ್ಲ ರೈತರಿಗೂ ಅತ್ಯಾಧುನಿಕ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಸೇವೆ ನೀಡುವಂತಹ ಕೃಷಿ ಯಂತ್ರಧಾರೆ ಯೋಜನೆ ರೈತರಿಗೆ ವರಧಾನವಾಗಲಿದೆ. ರೈತರು ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚಿನ ಬಂಡವಾಳ ಹಾಕಿ, ಸಾಲದ ಸುಳಿಗೆ ಸಿಲುಕುವುದನ್ನು ತಪ್ಪಿಸಲು, ಸರ್ಕಾರವೇ ಈ ಕ್ಷೇತ್ರದಲ್ಲಿ ಬಂಡವಾಳ ಹೂಡಿ, ಅತ್ಯಲ್ಪ ದರದಲ್ಲಿ ಅಂದರೆ ಮಾರುಕಟ್ಟೆ ದರಕ್ಕಿಂತಲೂ ಶೇ. ೩೦ ರಷ್ಟು ಕಡಿಮೆ ಬಾಡಿಗೆ ದರದಲ್ಲಿ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಒದಗಿಸಲು ಈ ಯೋಜನೆ ಜಾರಿಗೊಳಿಸಿದೆ. ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಾಗೇಪಲ್ಲಿ ತಾಲ್ಲೂಕು ಕೃಷಿ ಇಲಾಖೆ ಕೃಷಿ ನಿರ್ದೇಶಕ ಕೆ .ಸಿ.ಮಂಜುನಾಥ, ತೋಟಗಾರಿಕೆ ಇಲಾಖೆ ನಿರ್ದೇಶಕ ಈಶ್ವರಪ್ಪ ,ಚಿನ್ನ ಕೈವಾರಮಯ್ಯ ರೇಷ್ಮೆ ಇಲಾಖೆ, ರವಿಚಂದ್ರರೆಡ್ಡಿ ಕೃಷಿ ಇಲಾಖೆ, ಬಾಬು ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು, ಹಾಗೂ ಮಾಜಿ ಗೂಳೂರು ಜಿಲ್ಲಾ ಪಂಚಾಯತಿ ಸದಸ್ಯ ನರಸಿಂಹಪ್ಪ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು

ವರದಿ: ಗೋಪಾಲ ರೆಡ್ಡಿ ಬಾಗೇಪಲ್ಲಿ

error: