May 17, 2024

Bhavana Tv

Its Your Channel

ಎಸ್. ಎನ್. ಸುಬ್ಬಾರೆಡ್ಡಿ ಚಾರಿಟೇಬಲ್ ಟ್ರಸ್ಟ್ ಹಾಗೂ ಬೆಂಗಳೂರು ಶಂಕರ್ ಕಣ್ಣಿನ ಆಸ್ಪತ್ರೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರ

ಬಾಗೇಪಲ್ಲಿ:- ಜೀವನದಲ್ಲಿ ಅತ್ಯಮೂಲ್ಯವಾದ ಕಣ್ಣು ಸುರಕ್ಷಿತವಾಗಿರಬೇಕಾದರೆ ಕಾಲ ಕಾಲಕ್ಕೆ ತಪಾಸಣೆ ಹಾಗೂ ಕಾಳಜಿ ಬಹುಮುಖ್ಯ ಎಂದು ಬೆಂಗಳೂರು ಶಂಕರ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥ ಡಾ|| ಶಿವಪ್ರಕಾಶ್ ಹೇಳಿದರು. ಅವರು ಬಾಗೇಪಲ್ಲಿ ಪಟ್ಟಣದ ಶಾಂತಿ ನಿಕೇತನ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಉದ್ಘಾಟನೆ ಮಾಡಿ ಮಾತನಾಡಿ ಮನುಷ್ಯನಿಗೆ ಎಲ್ಲ ಸಂಪತ್ತು ಇದ್ದರೂ ಅದನ್ನು ಸವಿಯಬೇಕಾದರೆ ಆರೋಗ್ಯ ಉತ್ತಮವಾಗಿರಬೇಕು ಪ್ರಪಂಚ ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಇಟ್ಟುಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು. ಸೂಕ್ಷ್ಮ ಅಂಗ ಕಣ್ಣು ಬದುಕಿಗೆ ಬೆಳಕಾಗಿರಬೇಕಾದರೆ
ಹಿರಿಯರಿಗೆ ಮಕ್ಕಳು ಇಂತಹ ಉಚಿತ ತಪಾಸಣೆಗೆ ಕರೆತರುವ ಮೂಲಕ ಹಿರಿಯರ ಸೇವೆಗೆ ಬದ್ದರಾಗಿರಬೇಕು ಎಂದು ಡಾ|| ಶಿವಪ್ರಕಾಶ್ ಆರೋಗ್ಯ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಬಾಗೇಪಲ್ಲಿ ತಾಲ್ಲೂಕಿನಾದ್ಯಂತ ಸುಮಾರು ೧೫೦ಕ್ಕೂ ಹೆಚ್ಚು ಜನರು ತಪಾಸಣೆ ನಡೆಸಿಕೊಂಡು ಇವರನ್ನು ಬೆಂಗಳೂರು ಶಂಕರ್ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಅವರಿಗೆ ಕಣ್ಣಿನ ಪೊರೆ ಮತ್ತು ಶಸ್ತ್ರಚಿಕಿತ್ಸೆ ನಡೆಸಿ ಮತ್ತೆ ಬಾಗೇಪಲ್ಲಿ ಕರೆದುಕೊಂಡು ಬರಲು ಎಸ್. ಎನ್.ಸುಬ್ಬಾರೆಡ್ಡಿ ಚಾರಿಟಬಲ್ ಟ್ರಸ್ಟ್ ವಹಿಸಿದೆ ಎಂದು ಸೂರ್ಯನಾರಾಯಣ ರೆಡ್ಡಿ ಹೇಳಿದರು.
ಈ ಸಂದರ್ಭದಲ್ಲಿ ಅಶೋಕ ರೆಡ್ಡಿ, ಲೋಕೇಶ್ ರೆಡ್ಡಿ ,ಹನುಮಂತ ರೆಡ್ಡಿ ಹಾಗೂ ಶ್ರೀನಿವಾಸ್ (ಲಂಬೂ) ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

ವರದಿ: ಗೋಪಾಲ ರೆಡ್ಡಿ ಬಾಗೇಪಲ್ಲಿ

error: