May 17, 2024

Bhavana Tv

Its Your Channel

ಜಿ.ಪಂ,ತಾ.ಪO ಚುನಾವಣೆಗೆ ಸಿದ್ದರಾಗಿ:-ಎಸ್. ಸಿ ಮೋರ್ಚಾ ರಾಜ್ಯಾಧಕ್ಷ ಚಲುವಾದಿ ನಾರಾಯಣ ಸ್ವಾಮಿ

ಬಾಗೇಪಲ್ಲಿ:-ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ವರ್ಷಾಂತ್ಯಕ್ಕೆ ನಡೆಯುವ ಸಾಧ್ಯತೆ ಇದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಬಿಜೆಪಿ ಎಸ್. ಸಿ ಮೋರ್ಚಾ ರಾಜ್ಯಾಧಕ್ಷ ಚಲುವಾದಿ ನಾರಾಯಣ ಸ್ವಾಮಿ ಹೇಳಿದರು.

ಬಾಗೇಪಲ್ಲಿ ಪಟ್ಟಣದ ದ್ವಾರಕಾ ಪಾರ್ಟಿ ಹಾಲ್ ನಲ್ಲಿ ನಡೆದ ಜಿಲ್ಲಾ ಬಿಜೆಪಿ ಎಸ್.ಸಿ.ಮೋರ್ಚಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಮುಂಬರುವ ಜಿ.ಪಂ.ಮತ್ತು ತಾ.ಪಂ ಚುನಾವಣೆಯಲ್ಲಿ ಬಿಜೆಪಿವನ್ನು ಅಧಿಕಾರಕ್ಕೆ ತರಲು ಯುವಮೋರ್ಚಾ ಕಾರ್ಯಕರ್ತರು ಪಕ್ಷ ದ ತತ್ತ್ವ ಸಿದ್ಧಾಂತಗಳಿಗೆ ಬದ್ಧರಾಗಬೇಕು. ಜನರು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸಲು ಹೋರಾಟಗಳನ್ನು ರೂಪಿಸಲು ಮುಂದಾಗಬೇಕು ಎಂದು ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಸಲಹೆ ಮಾಡಿದರು.

ಬಿಜೆಪಿಯು ದಲಿತರ ಹಾಗೂ ಮುಸ್ಲಿಮರ ವಿರೋಧಿಯಲ್ಲ. ಆದರೆ ಕಾಂಗ್ರೆಸ್ ಅಂಬೇಡ್ಕರ್ ಅವರ ಹೆಸರು ಹೇಳಿಕೊಂಡು ಕಾಂಗ್ರೆಸ್ ರಾಜಕೀಯ ಲಾಭ ಪಡೆಯುತ್ತಿದೆ. ಆದರೆ, ಅವರ ಆಶಯಗಳಿಗೆ ತಕ್ಕಂತೆ ಎಂದಿಗೂ ನಡೆದುಕೊಂಡಿಲ್ಲ. ಹಲವು ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ, ಅಂಬೇಡ್ಕರ್ ಅವರ ಜನ್ಮ ಸ್ಥಳ ಮತ್ತಿತರವನ್ನು ಅಭಿವೃದ್ಧಿ ಪಡಿಸುವತ್ತ ಗಮನ ಹರಿಸಿಲ್ಲ ಎಂದು ದೂರಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಚಿಂತನೆಯನ್ನು ಸಾಕಾರಗೊಳಿಸಲು ಪ್ರಯತ್ನಿಸುತ್ತಿದ್ದು, ಅಲ್ಪಸಂಖ್ಯಾತರ ದಲಿತರ ಅಭಿವೃದ್ಧಿಗಾಗಿ ಬಿಜೆಪಿ ಗರಿಷ್ಠರ ಪ್ರಮಾಣದಲ್ಲಿ ಪ್ರಯತ್ನಿಸುತ್ತಿದೆ. ಸರ್ಕಾರದ ಉತ್ತಮ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ, ಸಮಾಜದ ವಿಕಾಸಕ್ಕಾಗಿ ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಕೋರಿದರು.
ಈ ಸಂದರ್ಭದಲ್ಲಿ ಎಸ್.ಸಿ.ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಶ್ರೀದೇವಿ, ರಾಜ್ಯ ಕಾರ್ಯದರ್ಶಿ ಹನುಮಂತಯ್ಯ,ರಾಜ್ಯ ಕಾರ್ಯಕಾರಿಣಿ ಸದಸ್ಯರು ಮುನಿ ಹನುಮಯ್ಯ,ಗಂಗಾಧರಪ್ಪ,ಜಿಲ್ಲಾ ಪ್ರದಾನ ಕಾರ್ಯದರ್ಶಿ ಕೃಷ್ಣ ಮೂರ್ತಿ, ದೇವರಾಜ್ ಜಿಲ್ಲಾ ಎಸ್. ಸಿ.ಮೋರ್ಚಾ ಅದ್ಯಕ್ಷ ಹಾಗೂ ಕೆ.ಡಿ.ಪಿ ಸದಸ್ಯರಾದ ವೆಂಕಟೇಶ್, ಬಾಗೇಪಲ್ಲಿ ತಾಲ್ಲೂಕು ಬಿಜೆಪಿ ಪಕ್ಷದ ಮಂಡಲಾದ್ಯಕ್ಷ ಆರ್ ಪ್ರತಾಪ್, ಹಾಗೂ ಎಸ್. ಸಿ.ಮೋರ್ಚಾ ಪದಾಧಿಕಾರಿಗಳು ಇದ್ದರು.

ವರದಿ: ಗೋಪಾಲ ರೆಡ್ಡಿ ಬಾಗೇಪಲ್ಲಿ

error: